ಬೆಂಗಳೂರು : ಸಂಸದ ಪ್ರಜ್ವಲ್ ರೇವಣ್ಣ ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಹೈಕೊರ್ಟ್ ತೀರ್ಪು ನೀಡಿ ಆದೇಶಿಸಿದೆ.
ರಾಜ್ಯ ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿದ್ದ ಆರೋಪದಡಿ ಪ್ರಜ್ವಲ್ ರೇವಣ್ಣ ಅವರನ್ನು ಇಂದು ಹೈಕೋರ್ಟ್ ಸಂಸದ ಸ್ಥಾನದಿಂದ ಅನರ್ಹಗೊಳಿಸಿ ತೀರ್ಪು ನೀಡಿದೆ.
ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿದ್ದ ವಿಚಾರವನ್ನು ಪ್ರಶ್ನಿಸಿ ಎ. ಮಂಜು ಮತ್ತು ದೇವರಾಜೇಗೌಡ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಕುರಿತು ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ವಿಚಾರಣೆ ನಡೆಸಿದ ನ್ಯಾಯಪೀಠ ಪ್ರಜ್ವಲ್ ರೇವಣ್ಣನ ಸಂಸದ ಸ್ಥಾನದಿಂದ ಅನರ್ಹಗೊಳಿಸಿ ತೀರ್ಪು ನಿಡಿದೆ.
ಇನ್ನು ಕೆಲವೇ ತಿಂಗಳುಗಳಲ್ಲಿ ಬರಲಿದ್ದ 2024 ರ ಲೋಕಸಭಾ ಚುನಾವಣೆ ತಯಾರಿ ನಡೆಸಿದ್ದ ಪ್ರಜ್ವಲ್ ರೇವಣ್ಣ ಗೆ ಹೈಕೋರ್ಟ್ ತೀರ್ಪು ಬಾರಿ ಆಘಾತ ಉಂಟುಮಾಡಿದೆ.