Wednesday, January 22, 2025

ಬಿ.ಎಲ್ ಸಂತೋಷ್ ಹೇಳಿಕೆ ಶತಮಾನದ ಜೋಕ್ : ಕಾಂಗ್ರೆಸ್ ವ್ಯಂಗ್ಯ

ಬೆಂಗಳೂರು : ಕಾಂಗ್ರೆಸ್ ಶಾಸಕರು ಸಂಪರ್ಕದಲ್ಲಿದ್ದಾರೆ ಎಂಬ ಬಿ.ಎಲ್ ಸಂತೋಷ್ ಹೇಳಿಕೆಗೆ ರಾಜ್ಯ ಕಾಂಗ್ರೆಸ್​ ತಿರುಗೇಟು ನೀಡಿದೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಕಾಂಗ್ರೆಸ್ ಶಾಸಕರು ಸಂಪರ್ಕದಲ್ಲಿದ್ದಾರೆ ಎನ್ನುವುದು ಶತಮಾನದ ಜೋಕ್ ಎಂದು ಕುಟುಕಿದೆ.

ಮಾಜಿ ಮುಖ್ಯಮಂತ್ರಿ ಡಾ.ಬಿ.ಎಸ್ ಯಡಿಯೂರಪ್ಪ ಅವರಿಗೆ ಸೆಡ್ಡು ಹೊಡೆಯಲು ಬಿ.ಎಲ್ ಸಂತೋಷ್ ಸಭೆ ನಡೆಸಿದ್ದಾರೆ. ಈ ಸಭೆಗೆ ಹಲವು ಬಿಜೆಪಿ ಶಾಸಕರು, ನಾಯಕರೇ ಗೈರಾಗಿದ್ದರು. ಬಿ.ಎಲ್​ ಸಂತೋಷ್ ಅವರು ಸ್ವತಃ ಬಿಜೆಪಿ ಶಾಸಕರೊಂದಿಗೇ ಸಂಪರ್ಕ ಸಾಧಿಸಲು ಸಾಧ್ಯವಾಗಿಲ್ಲ. ಸುಳ್ಳು ಹೇಳಿಕೊಂಡು ತಿರುಗುವ ಮೊದಲು ಸಂತೋಷ್ ಅವರು ತಮ್ಮ ಪಕ್ಷದ ಶಾಸಕರೊಂದಿಗೆ ಸಂಪರ್ಕ ಸಾಧಿಸಲಿ. ಶಾಸಕರ ವಿಶ್ವಾಸವನ್ನು ಹೊಂದಲು ಪ್ರಯತ್ನಿಸಲಿ ಎಂದು ಟಾಂಗ್ ಕೊಟ್ಟಿದೆ.

ಸಂತೋಷ್​ಗೆ ನಯಾಪೈಸೆ ಕಿಮ್ಮತ್ತಿಲ್ಲ

ಬಿಜೆಪಿ ತನ್ನ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಮಾಡಲು ಸಭೆ ನಡೆಸಬೇಕಿತ್ತು. ನೂತನ ರಾಜ್ಯಾಧ್ಯಕ್ಷರ ನೇಮಕಕ್ಕಾದರೂ ಸಭೆ ನಡೆಸಬೇಕಿತ್ತು. ಆದರೆ, ಒಬ್ಬ ವ್ಯಕ್ತಿಯ ಪ್ರತಿಷ್ಠೆಯ ಹಪಹಪಿಯನ್ನು ಸಂತೈಸಲು ಸಭೆ ನಡೆಸಿದೆ. ಬಿಜೆಪಿಯ ಅಸಮಾಧಾನಿತರು ಈ ಸಭೆಯಿಂದ ದೂರ ಉಳಿಯುವ ಮೂಲಕ BJP vsBJP ಕಿತ್ತಾಟ ಮತ್ತೊಮ್ಮೆ ಬಹಿರಂಗವಾಗಿದೆ. ಬಿ.ಎಲ್ ಸಂತೋಷ್ ಅವರಿಗೆ ನಯಾಪೈಸೆ ಕಿಮ್ಮತ್ತಿಲ್ಲ ಎಂಬುದನ್ನು ಅನಾವರಣಗೊಂಡಿದೆ ಎಂದು ಕಾಲೆಳೆದಿದೆ.

RELATED ARTICLES

Related Articles

TRENDING ARTICLES