Wednesday, January 22, 2025

ಬಿ.ಎಲ್ ಸಂತೋಷ್ ಮೊದಲು ಬಿಜೆಪಿಗರನ್ನು ಉಳಿಸಿಕೊಳ್ಳಲಿ : ಜಗದೀಶ್ ಶೆಟ್ಟರ್

ಹುಬ್ಬಳ್ಳಿ : ಕಾಂಗ್ರೆಸ್ ಶಾಸಕರು ಸಂಪರ್ಕದಲ್ಲಿದ್ದಾರೆ ಎಂಬ ಬಿ.ಎಲ್ ಸಂತೋಷ್ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಎಂಎಲ್​ಸಿ ಜಗದೀಶ್ ಶೆಟ್ಟರ್ ತಿರುಗೇಟು ನೀಡಿದರು.

ಹುಬ್ಬಳ್ಳಿ ಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬಿ.ಎಲ್ ಸಂತೋಷ್ ಅವರು ಮೊದಲು ಬಿಜೆಪಿ ಪಕ್ಷದಲ್ಲಿರುವವರನ್ನು ಉಳಿಸಿಕೊಳ್ಳಲಿ ಎಂದು ಕುಟುಕಿದರು.

ಹಾಲಿ ಶಾಸಕರನ್ನು, ಮಾಜಿ ಶಾಸಕರನ್ನು‌ ಉಳಸಿಕೊಳ್ಳಲಿ. ಅವರ ಪಕ್ಷದ ಅಸ್ತಿತ್ವ ಉಳಸಿಕೊಂಡರೆ ಸಾಕಾಗಿದೆ. ಬೇರೆ ಪಕ್ಷದವರನ್ನು ಕರೆದುಕೊಂಡು ಬಂದು ಹೊಸ ಸರ್ಕಾರ ಮಾಡೋದನ್ನು ಬಿಟ್ಟು ಬಿಡಲಿ. ಬರೀ ಆಪರೇಶನ್ ಮಾಡಿ ಸರ್ಕಾರ ರಚನೆ ಮಾಡೋದಾ? ಇಡೀ ರಾಷ್ಟ್ರದಲ್ಲಿ ಆಪರೇಶನ್ ಮಾಡೋದು ಎಂದು ಚಾಟಿ ಬೀಸಿದರು.

ಇದನ್ನೂ ಓದಿ : ಬಿ.ಎಲ್ ಸಂತೋಷ್ ಹೇಳಿಕೆ ಶತಮಾನದ ಜೋಕ್ : ಕಾಂಗ್ರೆಸ್ ವ್ಯಂಗ್ಯ

ಆಪರೇಶನ್ ‌ಮಾಡೋದೇ ಕೆಲಸ

ಕರ್ನಾಟಕದಲ್ಲಿ ಬಿಜೆಪಿಗೆ ಒಂದು ಸಲವೂ ಬಹುಮತ ಬರಲಿಲ್ಲ. ಕಾಂಗ್ರೆಸ್ ಪಕ್ಷವನ್ನು ನೋಡಿ 136 ಸೀಟು ಬಂದಿದೆ. ಬೆಳಗ್ಗೆ ಇಂದ ಸಾಯಂಕಾಲವರೆಗೂ ಆಪರೇಶನ್ ‌ಮಾಡೋದೇ ಇವರ ಕೆಲಸ. ಹಿರಿಯರನ್ನು ಕಡೆಗಣಿಸಿ ಹೊಸಬರನ್ನು ಕರೆದುಕೊಂಡು ಬರೋದು ನಿಮ್ಮ ಕೆಲಸ. ನಾನು ಯಾಕೆ ಅವರ ಬಗ್ಗೆ ಯೋಚನೆ ಮಾಡಲಿ. ಅದು ಅವರ ಪಕ್ಷಕ್ಕೆ ಬಿಟ್ಟ ಕೆಲಸ ಎಂದು ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದರು.

RELATED ARTICLES

Related Articles

TRENDING ARTICLES