Saturday, November 2, 2024

ದುಡುಕಿದ ಅನ್ನದಾತ..! ಕಾಫಿನಾಡಲ್ಲಿ ಮತ್ತೊಬ್ಬ ರೈತ ನೇಣಿಗೆ ಶರಣು

ಚಿಕ್ಕಮಗಳೂರು : ಕಾಫಿನಾಡು ಚಿಕ್ಕಮಗಳೂರಿನಲ್ಲಿ ಬರಕ್ಕೆ ಮತ್ತೊಬ್ಬ ರೈತ ಬಲಿಯಾಗಿದ್ದಾರೆ. ಎರಡು ದಿನದಲ್ಲಿ ಇಬ್ಬರು ರೈತರ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮಳೆ ಇಲ್ಲದೆ ಬೆಳೆ ನಾಶವಾದ ಹಿನ್ನೆಲೆ ಮನನೊಂದು ರೈತನೊಬ್ಬ ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಜ್ಜಂಪುರ ತಾಲೂಕಿನ ಚಿಕ್ಕನಲ್ಲೂರು ಗ್ರಾಮದಲ್ಲಿ ನಡೆದಿದೆ.

ಪರಮೇಶ್ವರಪ್ಪ (52) ಆತ್ಮಹತ್ಯೆಗೆ ಶರಣಾದ ರೈತ. ಈತ 3 ಎಕರೆ ಜಮೀನನಲ್ಲಿ ಹಾಕಿದ್ದ ಈರುಳ್ಳಿ ಬೆಳೆ ಸಂಪೂರ್ಣ ನಾಶವಾಗಿತ್ತು. ಬ್ಯಾಂಕ್, ಬಡ್ಡಿ ಹಾಗೂ ಕೈ ಸಾಲ ಸೇರಿ 5 ಲಕ್ಷಕ್ಕೂ ಅಧಿಕ ಸಾಲ ಮಾಡಿದ್ದರು. ಸಾಲ ತೀರಿಸಲಾಗದೆ ಮನನೊಂದು ನೇಣಿಗೆ ಕೊರಳೊಡ್ಡಿದ್ದಾರೆ ಎನ್ನಲಾಗಿದೆ.

ಈ ಸಂಬಂಧ ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಿರಿಯಾಪುರದಲ್ಲಿ ರೈತ ಸತೀಶ್ ಎಂಬುವವರು ಕೂಡ ಸಾಲಕ್ಕೆ ಹೆದರಿ ಆತ್ಮಹತ್ಯೆಗೆ ಶರಣಾಗಿದ್ದರು. ಇದು ಜಿಲ್ಲೆಯಲ್ಲಿ ದಾಖಲಾದ ಎರಡನೇ ಪ್ರಕರಣವಾಗಿದೆ.

RELATED ARTICLES

Related Articles

TRENDING ARTICLES