Sunday, December 22, 2024

ಸಾಲಬಾಧೆ ತಾಳಲಾರದೆ ನೇಣು ಬಿಗಿದು ರೈತ ಆತ್ಮಹತ್ಯೆ

ಮಂಡ್ಯ : ಸಾಲಬಾಧೆ ತಾಳಲಾರದೆ ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಹುಲಿಗೆರೆಪುರ ಗ್ರಾಮದಲ್ಲಿ ನಡೆದಿದೆ.

ಎಚ್‌.ಬಿ. ಶಂಕರಯ್ಯ (64) ಆತ್ಮಹತ್ಯೆ ಮಾಡಿಕೊಂಡ ರೈತ. ಮೃತ ಶಂಕರಯ್ಯ ವ್ಯವಸಾಯವನ್ನೇ ನಂಬಿಕೊಂಡು ಜೀವನ ನಿರ್ವಹಣೆ ಮಾಡುತ್ತಿದ್ದರು.

ಶಂಕರಯ್ಯ ಅವರ ಮಗ ಕಿಡ್ನಿ ವೈಫಲಕ್ಕೀಡಾಗಿ ಅನಾರೋಗ್ಯಕ್ಕೆ ಒಳಗಾಗಿದ್ದನು. ಮಗನ ಚಿಕಿತ್ಸೆ ಮತ್ತು ಜೀವನ ನಿರ್ವಹಣೆಯ ಹೊಣೆ ಹೊತ್ತಿದ್ದ ಇವರಿಗೆ ವ್ಯವಸಾಯದಿಂದ ನಷ್ಟ ಉಂಟಾಗಿತ್ತು. ಆದಾಯ ಬಾರದ ಹಿನ್ನೆಲೆ ಜೀವನ ನಿರ್ವಹಣೆಗೆ ಸಾಲದ ಮೊರೆ ಹೊಗಿದ್ದರು.

12 ಲಕ್ಷ ರೂ. ಸಾಲ

ಸುಮಾರು 12 ಲಕ್ಷ ಸಾಲ ಮಾಡಿಕೊಂಡಿದ್ದರು. ಪತ್ನಿ ಹೆಸರಿನಲ್ಲಿ ಧರ್ಮಸ್ಥಳ ಸಂಘದಲ್ಲಿ 1.50 ಲಕ್ಷ ರೂ., ಬ್ಯಾಂಕಿನಲ್ಲಿ 5 ಲಕ್ಷ ರೂ. ಮತ್ತು ಖಾಸಗಿಯಾಗಿ 5 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಸಾಲ ಮರುಪಾವತಿಸುವ ಚಿಂತೆಯಲ್ಲಿದ್ದ ರೈತ, ಇಂದು ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮದ್ದೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಮೃತ ದೇಹ ರವಾನಿಸಲಾಗಿದೆ. ಸಂಬಂಧ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

Related Articles

TRENDING ARTICLES