Wednesday, January 22, 2025

ಬೆಂಗಳೂರು ಸೇರಿದಂತೆ ಹಲವೆಡೆ ಗುಡುಗು ಸಹಿತ ಮಳೆ!

ಬೆಂಗಳೂರು :  ಜುಲೈ ತಿಂಗಳಿನಲ್ಲಿ ರಾಜ್ಯದಲ್ಲಿ ಅಬ್ಬರಿಸಿ ಆ ಬಳಿಕ ಮರೆಯಾಗಿದ್ದ ಮಳೆರಾಯ ಇದೀಗ ಮತ್ತೆ ಆಗಮಿಸಿದ್ದಾನೆ. ರಾಜ್ಯದ ರಾಜಧಾನಿ ಬೆಂಗಳೂರು, ಮಂಡ್ಯ, ರಾಮನಗರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆರಾಯನ ದರ್ಶನ ಆಗಿದೆ.

ಬಿಸಿಲ ಬೇಗೆಗೆ ಬಸವಳಿದಿದ್ದ ಸಿಲಿಕಾನ್  ಸಿಟಿಯಲ್ಲಿ ವರುಣನ ಆರ್ಭಟ ಜೋರಾಗಿತ್ತು. ಬಸವನಗುಡಿ, ಬನಶಂಕರಿ, ಜಯನಗರ, ಕಾರ್ಪೊರೇಷನ್ ಸರ್ಕಲ್, ಸಂಪಂಗಿರಾಮ ನಗರ, ಡಬಲ್ ರೋಡ್, ಯಶವಂತಪುರ, ಹೆಬ್ಬಾಳ, ಮೆಜೆಸ್ಟಿಕ್, ಗಾಂಧಿ ನಗರ, KR ಸರ್ಕಲ್, ರಾಜಾಜಿನಗರ ಸೇರಿ ಹಲವು ಕಡೆಗಳಲ್ಲಿ ಮಳೆಯಾಗಿದೆ.

ಇದನ್ನೂ ಓದಿ: ಆತ್ಮೀಯ ರೈತಾಪಿ ಶಿಷ್ಯರಿಗೆ ತೇಜಿ ಮಂದಿ ಕಾಲಜ್ಞಾನ

ಧಾರಾಕಾರ ಮಳೆಯಿಂದಾಗಿ ವಾಹನ ಸವಾರರು ಹಾಗೂ ಸಾರ್ವಜನಿಕರಿಗೆ ತೊಂದರೆ ಅನುಭವಿಸಿದರು. ಅಂಡರ್​ಪಾಸ್​ಗಳು ಸಂಪೂರ್ಣ ಜಲಾವೃತವಾಗಿದ್ರೆ, ಮಳೆ ಅಡಿಯಿಂದಾಗಿ ಹಲವು ಕಡೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಇನ್ನು ಹಲವು ಕಡೆ ಸ್ಲೋ ಮೂವಿಂಗ್ ಟ್ರಾಫಿಕ್ ಕಂಡು ಬಂತು.

ದಿಢೀರ್‌ ಮಳೆಗೆ ಬೆಂಗಳೂರಿನ ರಸ್ತೆಗಳು ಜಲಾವೃತಗೊಂಡಿದ್ದು, ಕೆಲವು ಕಡೆ ಟ್ರಾಫಿಕ್​ ಜಾಮ್​ ಉಂಟಾಗಿದೆ. ಹೆಬ್ಬಾಳದಲ್ಲಿ ತಗ್ಗು ಪ್ರದೇಶದ ಹಲವು ಮನೆಗಳಿಗೆ ನೀರು ನುಗ್ಗಿದೆ.

ಬೆಂಗಳೂರು ಮಾತ್ರವಲ್ಲದೆ ದೊಡ್ಡಬಳ್ಳಾಪುರ, ಮಂಡ್ಯ, ಕೋಲಾರ, ದಾವಣಗೆರೆ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿಯೂ ಗುರುವಾರ ಉತ್ತಮ ಮಳೆಯಾಗಿದೆ.

ಈ ಮಧ್ಯೆ, ಸೆಪ್ಟೆಂಬರ್‌ 2 ರಿಂದ 7 ರವೆರೆಗೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದ್ದು, ಕೆಲವು ಜಿಲ್ಲೆಗಳಲ್ಲಿಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

RELATED ARTICLES

Related Articles

TRENDING ARTICLES