Monday, December 23, 2024

ಪಾಣಾರ ಸಮುದಾಯದಲ್ಲಿ ಹುಟ್ಟುತ್ತೇನೆ : ರಿಷಬ್ ಶೆಟ್ಟಿ

ಉಡುಪಿ : ಮುಂದಿನ ಜನ್ಮದಲ್ಲಿ ಪಾಣಾರ ಸಮುದಾಯದಲ್ಲಿ ಹುಟ್ಟುವ ಆಸೆಯಿದೆ ಎಂದು ನಟ, ನಿರ್ದೇಶಕ ರಿಷಬ್ ಶೆಟ್ಟಿ ಹೇಳಿದರು.

ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆದ ಪಾಣಾರ ನಲಿಕೆ ಸಮುದಾಯದ ಸಮಾವೇಶದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಅಮೇರಿಕಾದ ಮ್ಯೂಸಿಯಂನಲ್ಲಿ ಪಂಜುರ್ಲಿಯ ಮೊಗ ಇಟ್ಟಿದ್ದಾರೆ. ಇದು ನಮ್ಮ ನೆಲದ ದೈವ ದೇವರ ಶಕ್ತಿ. ಪಾಣಾರನಾಗಿ ದೈವದ ಚಾಕರಿ ಮಾಡುವಂತಾಗಲಿ. ಪಂಜುರ್ಲಿ, ಗುಳಿಗ-ಅಣ್ಣಪ್ಪಸ್ವಾಮಿಯ ಸೇವೆ ಮಾಡುವಂತಾಗಲಿ. ಸಮಾಜಮುಖಿ ಫೌಂಡೇಶನ್ ಮಾಡುತ್ತಿದ್ದೇವೆ ಎಂದು ಹೇಳಿದರು.

ನಲಿಕೆ ಸಮುದಾಯದ ಓದುವ ಮಕ್ಕಳಿಗೆ ಟ್ರಸ್ಟ್ ನಿಂದ ಸಹಾಯ ಮಾಡುತ್ತೇವೆ. ಪಾಣಾರ ಸಮುದಾಯದ ಮಕ್ಕಳಲ್ಲಿ ಶಿಕ್ಷಣ ಜೊತೆ ಆಚಾರ-ವಿಚಾರ ಮುಂದುವರೆಸಲಿ. ಸಮುದಾಯಕ್ಕೆ ಭವನಕ್ಕೆ ಶಕ್ತಿಮೀರಿ ಸರ್ಕಾರಕ್ಕೆ ಮನವರಿಕೆ ಮಾಡುತ್ತೇನೆ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಸಚಿವರ ಬಳಿ ಶಕ್ತಿಮೀರಿ ಒತ್ತಾಯ ಮಾಡುತ್ತೇನೆ ಎಂದು ರಿಷಬ್ ಶೆಟ್ಟಿ ಭರವಸೆ ನೀಡಿದರು.

RELATED ARTICLES

Related Articles

TRENDING ARTICLES