ಚನ್ನೈ: ಸನಾತನ ಧರ್ಮವನ್ನು ಮಲೇರಿಯಾ ಮತ್ತು ಡೆಂಘೆಗೆ ಹೋಲಿಕೆ ಮಾಡುವ ಮೂಲಕ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಪುತ್ರ ಹಾಗೂ ಸಚಿವ ಉದಯನಿಧಿ ಸ್ಟಾಲಿನ್ ಅವರು ಹೊಸ ವಿವಾದವನ್ನು ಹುಟ್ಟುಹಾಕಿದ್ದಾರೆ.
ಇದಕ್ಕೆ ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಅವರು ಸಹ ಖಡಕ್ ತಿರುಗೇಟನ್ನು ನೀಡಿದ್ದಾರೆ. ಶನಿವಾರ ಚೆನ್ನೈನಲ್ಲಿ ನಡೆದ ಸನಾತನ ನಿರ್ಮೂಲನ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ಉದಯನಿಧಿ ಸ್ಟಾಲಿನ್, ಸನಾತನ ಧರ್ಮ ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ವಿರುದ್ಧವಾಗಿದೆ.
ಕೆಲವೊಂದು ವಿಚಾರಗಳನ್ನು ಕೇವಲ ವಿರೋಧಿಸಿದರೆ ಸಾಲದು, ಅವುಗಳನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕು. ನಾವು ಡೆಂಘೆ, ಮಲೇರಿಯಾ ಅಥವಾ ಕರೊನಾವನ್ನು ವಿರೋಧ ಮಾಡಬಾರದು, ಅವುಗಳನ್ನು ಶಾಶ್ವತವಾಗಿ ತೊಡೆದುಹಾಕಬೇಕು. ಅದರಂತೆ ಸನಾತನವನ್ನು ನಿರ್ಮೂಲನೆ ಮಾಡಬೇಕು ಎಂದು ಯುವಜನ ಮತ್ತು ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್ ಹೇಳಿದ್ದಾರೆ.
Chennai | I thank the organisers of this conference for giving me the opportunity to deliver a special address. You have kept the name of the conference as ‘Sanatana Abolition Conference’ rather than ‘Anti-Sanatana Conference’, I appreciate that. Few things cannot be opposed,… pic.twitter.com/UvESuedy2X
— ANI (@ANI) September 2, 2023