Wednesday, January 22, 2025

ಶಕ್ತಿಯೋಜನೆ : ಆರ್ಥಿಕ ಸಂಕಷ್ಟದಲ್ಲಿ 200ಕ್ಕೂ ಹೆಚ್ಚು ಖಾಸಗಿ ಬಸ್​ ಕುಟುಂಬಗಳು!

ಚಿಕ್ಕಮಗಳೂರು : ಜಿಲ್ಲೆಯಲ್ಲಿ ಆರ್ಥಿಕ ಹೊಡೆತಕ್ಕೆ ಸಿಲುಕಿದ ಸುಮಾರು 200ಕ್ಕೂ ಹೆಚ್ಚು ಖಾಸಗಿ ಬಸ್​ಗಳ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿದೆ.

ಇದನ್ನೂ ಓದಿ: ಮಗಳ ತಂಟೆಗೆ ಬರಬೇಡ ಎಂದ ತಂದೆಯ ಕತ್ತು ಸೀಳಿದ ಪಾಗಲ್​ ಪ್ರೇಮಿ !

ರಾಜ್ಯ ಸರ್ಕಾರದ ಶಕ್ತಿಯೋಜನೆಯಿಂದಾಗಿ ಖಾಸಗಿ ಸಾರಿಗೆ ವ್ಯವಸ್ಥೆ ಹದಗೆಟ್ಟಿದ್ದು ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ನೂರಾರು ಕುಟುಂಬಗಳು ಬೀದಿಪಾಲಾಗಿದೆ. ಮಹಿಳೆಯರಿಗೆ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಿದ ಹಿನ್ನೆಲೆ ಚಿಕ್ಕಮಗಳೂರಿನಲ್ಲಿ  ಖಾಸಗಿ ಬಸ್​ ಗಳು ಆರ್ಥಿಕ ಶಕ್ತಿ ಕಳೆದುಕೊಂಡಿದೆ. ಬಸ್​ಗಳಲ್ಲಿ ಪ್ರಯಾಣಿಕರಿಲ್ಲದೇ ಡಿಸೇಲ್​ಗೂ ಕಾಸಿಲ್ಲದ ಪರಿಸ್ಥಿತಿ ನಿರ್ಮಾಣವಾಗಿ 1 ತಿಂಗಳಿನಿಂದ ಸಂಚಾರ ನಡೆಸದೆ ಕಂಗಾಲಾಗಿ ಕುಳಿತಿವೆ.

ಚಿಕ್ಕಮಗಳೂರಿನ 200ಕ್ಕೂ ಹೆಚ್ಚು ಖಾಸಗಿ ಬಸ್ ಕುಟುಂಬಗಳಿಗೆ ಸಂಕಷ್ಟ ಎದುರಾದ ಹಿನ್ನೆಲೆ ಈ ಕುರಿತು  ಬಸ್ ಮಾಲೀಕರಿಂದ ಸಾರಿಗೆ ನಿಗಮಕ್ಕೆ ದಾಖಲಾತಿ ಹಸ್ತಾಂತರ ಮಾಡಲಾಗಿದೆ. ಆರ್ಥಿಕ ಸಂಕಷ್ಟದಿಂದ ಪಾರಾಗುವಂತೆ ಮಾಡಲು ಮನವಿ ಮಾಡಿಕೊಳ್ಳಲಾಗಿದೆ.

RELATED ARTICLES

Related Articles

TRENDING ARTICLES