Thursday, December 19, 2024

ನಿಧಿಗಾಗಿ ಬಸವಣ್ಣನ ಮೂರ್ತಿ ಕಿತ್ತು, ದೇವಸ್ಥಾನ ಅಗೆದ ಕಳ್ಳರು

ಗದಗ : ತಾಲೂಕಿನ ಲಕ್ಕುಂಡಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೋಟೆಲ್ ಹಾಗೂ ಮನೆಗಳ ಕಳ್ಳತನ ಘಟನೆಗಳು ಇನ್ನೂ ಹಸಿಯಾಗಿರುವಾಗಲೇ, ಇಲ್ಲಿಯ ಐತಿಹಾಸಿಕ ದೇವಸ್ಥಾನವೊಂದರಲ್ಲಿ ನಿಧಿ ಆಸೆಗಾಗಿ ಕಳ್ಳರು ಮೂರ್ತಿಯಿರುವ ಸ್ಥಳ ಅಗೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಲಕ್ಕುಂಡಿ ಗ್ರಾಮದಿಂದ 3 ಕಿ.ಮೀ ದೂರದಲ್ಲಿರುವ ಕದಾಂಪೂರ ಗ್ರಾಮದ ರಸ್ತೆಗೆ ಹೊಂದಿಕೊಂಡಿರುವ ಜಮೀನೊಂದರಲ್ಲಿ ಈ ಘಟನೆ ನಡೆದಿದೆ.

ಐತಿಹಾಸಿಕ ಸೋಮೇಶ್ವರ ದೇವಾಲಯದ ಒಳಗೆ ಈಶ್ವರಲಿಂಗ ಮೂರ್ತಿಯ ಮುಂದೆ ಇದ್ದ ಬಸವಣ್ಣನ ಮೂರ್ತಿಯನ್ನು ಕಿತ್ತು ಹಾಕಿ, ಅದರ ಕೆಳಗೆ ಸುಮಾರು ಹತ್ತು ಅಡಿ ಆಳಕ್ಕೆ ಅಗೆಯಲಾಗಿದೆ. ನೂಲು ಹುಣ್ಣಿಮೆ ದಿನ ರಾತ್ರಿ ಈ ಪ್ರಕರಣ ನಡೆದಿದ್ದು, ಅರ್ಚಕರು ಮುಂಜಾನೆ ಪೂಜೆ ನೆರವೇರಿಸಲು ತೆರಳಿದಾಗ ಕೃತ್ಯ ಗಮನಕ್ಕೆ ಬಂದಿದೆ.

ನಿಧಿ ಆಸೆಗಾಗಿ ಕಳ್ಳರು ಇಂತಹ ಕೃತ್ಯವನ್ನು ಎಸಗಿರಬಹುದು ಎಂದು ದೇವಸ್ಥಾನದ ಅರ್ಚಕ ಶಿದ್ರಾಮಯ್ಯ ಮಾಯಾಕರಮಠ ಅಭಿಪ್ರಾಯಪಟ್ಟಿದ್ದಾರೆ.

RELATED ARTICLES

Related Articles

TRENDING ARTICLES