Sunday, December 22, 2024

INDIA ಸದಸ್ಯರನ್ನು ಖುಷಿಪಡಿಸಲು ತಮಿಳುನಾಡಿಗೆ ನೀರು: ಶೋಭಾ ಕರಂದ್ಲಾಜೆ

ಉಡುಪಿ : KRS ಅಣೆಕಟ್ಟಿನ ಪರಿಸ್ಥಿತಿಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶ್ವೇತಪತ್ರ ಹೊರಡಿಸಬೇಕು ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹಿಸಿದರು.

ಉಡುಪಿಯಲ್ಲಿ ಮಾತನಾಡಿದ ಅವರು, ಈ ವರ್ಷ ರಾಜ್ಯದಲ್ಲಿ ಮಳೆ ಕಡಿಮೆಯಿದ್ದು ಅಣೆಕಟ್ಟುಗಳು ಭರ್ತಿಯಾಗಿಲ್ಲ. ಬೆಂಗಳೂರು, ಕೋಲಾರ, ಮೈಸೂರು, ಮಂಡ್ಯ, ತುಮಕೂರಿಗೆ ಕುಡಿಯುವ ನೀರು ಒದಗಿಸುವ ಕಾವೇರಿ ನದಿಯ ನೀರನ್ನು ತಮಿಳುನಾಡಿಗೆ ಬಿಟ್ಟರೆ ಬೇಸಗೆಯಲ್ಲಿ ನೀರಿನ ಕೊರತೆ ಉಂಟಾಗಲಿದೆ ಎಂದರು.

ಇದನ್ನೂ ಓದಿ: ನೀರಿಗಾಗಿ ‘ಕಾವೇರಿ’ದ ಅಪ್ಪಿಕೊ ಚಳುವಳಿ!

ರಾಜ್ಯ ಸರಕಾರ ತಮಿಳುನಾಡು ಸರಕಾರದ ಮನವೊಲಿಸಬೇಕು. ಕಳೆದ ಬಾರಿಯೂ ನಿಗದಿತ ಪ್ರಮಾಣಕ್ಕಿಂತ ತಮಿಳುನಾಡಿಗೆ ಹೆಚ್ಚು ವರಿ ನೀರು ಬಿಡಲಾಗಿದೆ. ಈ ವರ್ಷ INDIA ಟೀಂ ಖುಷಿಪಡಿಸಲು ತಮಿಳುನಾಡಿಗೆ ನೀರು ಹರಿಸಲಾಗುತ್ತಿದೆ ಎಂದರು.

RELATED ARTICLES

Related Articles

TRENDING ARTICLES