Thursday, January 23, 2025

ಕಾವೇರಿಗೆ ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ ಶಿಫ್ಟ್​!​​

ಬೆಂಗಳೂರು : ಮುಖ್ಯಮಂತ್ರಿಗಳ ಅಧಿಕೃತ ನಿವಾಸ ‘ಕಾವೇರಿ’ಗೆ ಸಿಎಂ ಸಿದ್ದರಾಮಯ್ಯ ಇಂದು ಶಿಫ್ಟ್ ಆಗಿದ್ದಾರೆ. ಬಿ.ಎಸ್​. ಯಡಿಯೂರಪ್ಪ ಸಿಎಂ ಆಗಿದ್ದಾಗ ವಾಸವಿದ್ದ ಕಾವೇರಿ ನಿವಾಸದಲ್ಲಿ ದುರಸ್ತಿ ಕಾರ್ಯ ಕೈಗೊಳ್ಳಲಾಗಿತ್ತು. ದುರಸ್ತಿ ಕಾರ್ಯ ಪೂರ್ಣಗೊಂಡಿರುವ ಹಿನ್ನೆಲೆ, ಸಿಎಂ ಸಿದ್ದರಾಮಯ್ಯ ಇಂದು ಕಾವೇರಿ ನಿವಾಸದಲ್ಲಿ ವಿಶೇಷ ಪೂಜೆ ಮಾಡಿದ್ದಾರೆ.

ಇದನ್ನೂ ಓದಿ : ತಂದೆಯಾಗಿ ಬಡ್ತಿ ಪಡೆದ ಟೀಂ ಇಂಡಿಯಾ ವೇಗಿ ಬೂಮ್ರ!

ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸಿದ್ದರಾಮಯ್ಯರಿಂದ ಪೂಜೆ ಸಲ್ಲಿಸಲಾಗಿದೆ. ನಾಳೆ ಅಧಿಕೃತವಾಗಿ ಕಾವೇರಿ ನಿವಾಸಕ್ಕೆ ಪಾದಾರ್ಪಣೆ ಮಾಡಲಿದ್ದಾರೆ. ಕಳೆದ 2013ರಲ್ಲಿ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಇದೇ ಕಾವೇರಿ ನಿವಾಸದಲ್ಲಿ ಸಿದ್ದರಾಮಯ್ಯ ಉಳಿದುಕೊಂಡಿದ್ದರು.

ಬಳಿಕ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರ್ಕಾರದ ಅವಧಿಯಲ್ಲೂ ಕಾವೇರಿ ನಿವಾಸದಲ್ಲೇ ಉಳಿದುಕೊಂಡಿದ್ರು. ಅಂದು ಕೆ.ಜೆ.ಜಾರ್ಜ್ ಹೆಸರಿನಲ್ಲಿ ಹಂಚಿಕೆಯಾಗಿದ್ದ ಕಾವೇರಿ ನಿವಾಸದಲ್ಲಿ ಸ್ವತಃ ಸಿದ್ದರಾಮಯ್ಯ ಉಳಿದುಕೊಂಡಿದ್ರು. ಬದಲಾದ ಸನ್ನಿವೇಶದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ವಾಸ್ತವ್ಯ ಬದಲಿಸಿದ್ರು. ಕಾವೇರಿಯಿಂದ ಶಿವಾನಂದ ವೃತ್ತದ ಸರ್ಕಾರಿ ನಿವಾಸಕ್ಕೆ ಶಿಫ್ಟ್ ಆಗಿದ್ದರು. ಇದೀಗ ಸಿಎಂ ಆದ ಬಳಿಕ ಮತ್ತೆ ಕಾವೇರಿ ನಿವಾಸಕ್ಕೆ ಶಿಫ್ಟ್ ಆಗಿದ್ದಾರೆ.

RELATED ARTICLES

Related Articles

TRENDING ARTICLES