ಮಂಗಳೂರು : ಸರ್ಕಾರದ ಅನುಮತಿ ಇಲ್ಲದೆ ನೂರಾರು ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟ್ ನೀಡಿದ್ದ ಹಿನ್ನೆಲೆ ಮೆಡಿಕಲ್ ಕಾಲೇಜಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡುತ್ತಿರುವ ವಿದ್ಯಾರ್ಥಿಗಳು.
ಬಿಜೆಪಿ ಮುಖಂಡ ಗಣೇಶ್ ರಾವ್ ಮಾಲೀಕತ್ವದಲ್ಲಿ ಮಂಗಳೂರಿನ ನೀರುಮಾರ್ಗದಲ್ಲಿ ಎರಡು ವರ್ಷಗಳ ಹಿಂದೆ ಆರಂಭಗೊಂಡಿದ್ದ ಜಿ.ಆರ್. ಮೆಡಿಕಲ್ ಕಾಲೇಜು. 2022-23ನೇ ಸಾಲಿಗೆ 150 ವಿದ್ಯಾರ್ಥಿಗಳಿಗೆ ಎಂ.ಬಿ.ಬಿ.ಎಸ್ ದಾಖಲಾತಿ ಮಾಡಿಕೊಂಡಿದ್ದರು.
ಇದನ್ನು ಓದಿ : ಜ್ಯೂಸ್ ಎಂದು ಕೀಟನಾಶಕ ಸೇವಿಸಿ ಮಗು ಸಾವು
ಆದರೆ ಸರ್ಕಾರದ ಅನುಮತಿ ಇಲ್ಲದೆ ನೂರಾರು ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟ್ ನೀಡಿದ್ದರು. ಈ ಹಿನ್ನೆಲೆ ಮಾಹಿತಿ ತಿಳಿದಿದ್ದು, ಈಗಾಗಲೇ ರಾಷ್ಟ್ರೀಯ ವೈದ್ಯಕೀಯ ಆಯೋಗದಿಂದ ಸಮಗ್ರ ತನಿಖೆಗೆ ಸೂಚನೆಯನ್ನು ನೀಡಲಾಗಿದೆ. ಅಷ್ಟೇ ಅಲ್ಲದೆ ವಿದ್ಯಾರ್ಥಿಗಳ ಬಳಿ ಲಕ್ಷ ಲಕ್ಷ ಫೀಸ್ ಕಲೆಕ್ಟ್ ಮಾಡಿ ವಂಚಿಸಿದ್ದ ಆಡಳಿತ ಮಂಡಳಿ ವಿರುದ್ಧ ಮೆಟಿಕಲ್ ಕಾಲೇಜಿಗೆ ಮುತ್ತಿಗೆ ಹಾಕಿ ವಿದ್ಯಾರ್ಥಿಗಳು ಹಾಗೂ ಪೋಷಕರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
ಮೊದಲ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳು ಪರೀಕ್ಷೆ ಕಟ್ಟಲಾಗದೆ ಅತಂತ್ರವಾಗಿದ್ದು, ನೀರುಮಾರ್ಗದ ಮೆಡಿಕಲ್ ಕಾಲೇಜು ಮುಂಭಾಗದಲ್ಲಿ 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಧರಣಿ ಕೂತು ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ.