Friday, May 10, 2024

ಬಿಸ್ಲೆರಿ ನೀರಲ್ಲಿ ಭತ್ತ ನಾಟಿ ಮಾಡಿ ವಿನೂತನ ಪ್ರತಿಭಟನೆ

ಮಂಡ್ಯ : ತಮಿಳುನಾಡಿಗೆ ಕೆಆರ್​ಎಸ್​ (KRS) ಜಲಾಶಯದಿಂದ ನೀರು ಬಿಡುಗಡೆ ಹಿನ್ನೆಲೆ ಕಾವೇರಿ ಕಿಚ್ಚು ಮುಂದುವರಿದಿದ್ದು, ಮಂಡ್ಯ ರಕ್ಷಣಾ ವೇದಿಕೆ ಕಾರ್ಯಕರ್ತರಿಂದ ವಿನೂತನ ಪ್ರತಿಭಟನೆ ನಡೆಸಲಾಯಿತು.

ವೇದಿಕೆ ಅಧ್ಯಕ್ಷ ಶಂಕರ್ ಬಾಬು ಅವರ ನೇತೃತ್ವದಲ್ಲಿ ಬಿಸ್ಲೆರಿ ನೀರಿನಲ್ಲಿ ನಾಟಿ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ರೈತರ ಬೆಳೆಗಳಿಗೆ ನೀರು ಕೊಡುತ್ತಿಲ್ಲ, ತಮಿಳುನಾಡಿಗೆ ನೀರು ಹರಿಸುತ್ತಿದ್ದಾರೆ ಎಂದು ಆಕ್ರೋಶತರಾದ ರೈತರು, ಕಾರ್ಯಕರ್ತರು ಹನುಮಂತಪುರ ಗ್ರಾಮದ ಗದ್ದೆಯಲ್ಲಿ ನಾಟಿ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.

ಕಾವೇರಿ ನೀರು ಇಲ್ಲದೆ ಭತ್ತದ ನಾಟಿ ಮಾಡಲು ಆಗುತ್ತಿಲ್ಲ, ಬಿಸ್ಲೆರಿ ನೀರಿನಲ್ಲಿ ನಾಟಿ ಮಾಡುವ ಪರಿಸ್ಥಿತಿ ಬಂದಿದೆ ಎಂದು ಹೇಳಿ ಕೂಡಲೇ ನಿಲ್ಲಿಸಿ ರಾಜ್ಯ ಕಾಪಾಡಬೇಕು ಎಂದು ಆಗ್ರಹಿಸಿದ್ದಾರೆ. ರೈತರ ಸಂಕಷ್ಟಕ್ಕೆ ಸ್ಪಂದಿಸದ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿ ಗ್ರಾಮದ ರಾಮಚಂದ್ರು ಎಂಬುವವರ ಜಮೀನಿನಲ್ಲಿ ನಾಟಿ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗಿ ಭತ್ತದ ನಾಟಿ ಮಾಡಿ, ಬಿಸ್ಲೇರಿ ನೀರೆರೆದು ಪ್ರತಿಭಟನೆ ನಡೆಸಿದರು.

ಮೈಸೂರಿನ ಜಲದರ್ಶಿನಿ ಕಚೇರಿಗೆ ಮುತ್ತಿಗೆ

ಮೈಸೂರಲ್ಲೂ ಕಾವೇರಿ ನೀರು ಬಿಡುಗಡೆ ವಿರೋಧಿಸಿ ಹೋರಾಟ ನಡೆಸಲಾಗಿದೆ. ರಾಜ್ಯಾದ್ಯಂತ ಸಂಸದರ ಕಚೇರಿ ಮುಂದೆ ರೈತರ ಪ್ರತಿಭಟನೆ ಹಿನ್ನೆಲೆ ಸಂಸದ ಪ್ರತಾಪ್ ಸಿಂಹ ಕಚೇರಿಗೆ ಮುತ್ತಿಗೆ ಹಾಕಲು ರೈತರು ಹಾಗೂ ಆಪ್ ಸದಸ್ಯರು ತಯಾರಿ ನಡೆಸಿದ್ದಾರೆ. ಮೈಸೂರಿನ ಜಲದರ್ಶಿನಿ ಅತಿಥಿಗೃಹದಲ್ಲಿರುವ ಕಚೇರಿಗೆ ಮುತ್ತಿಗೆ ಹಾಕಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

RELATED ARTICLES

Related Articles

TRENDING ARTICLES