Sunday, December 29, 2024

ಒಂದೇ ಒಂದೂ ರಜೆ ತೆಗೆದುಕೊಂಡಿಲ್ಲ ಪ್ರಧಾನಿ ಮೋದಿ

ನವದೆಹಲಿ : ಎರಡು ಬಾರಿ ದೇಶದ ಪ್ರಧಾನ ಮಂತ್ರಿ ಆದಾಗಿನಿಂದ ಈವರೆಗೆ ನರೇಂದ್ರ ಮೋದಿ ಅವರು ಒಂದೇ ಒಂದು ರಜೆ ತೆಗೆದುಕೊಂಡಿಲ್ಲ ಎಂದು ಪ್ರಧಾನ ಮಂತ್ರಿಗಳ ಸಚಿವಾಲಯ ತಿಳಿಸಿದೆ.

ಪುಣೆ ಮೂಲದ ಆರ್​ಟಿಐ ಕಾರ್ಯಕರ್ತನೊಬ್ಬ ಆರ್​ಟಿಐ ಮೂಲಕ ಮಾಹಿತಿ ಪಡೆದುಕೊಂಡಿದ್ದು, ಅದರಲ್ಲಿ ಈ ಅಚ್ಚರಿ ಮಾಹಿತಿ ಬಹಿರಂಗವಾಗಿದೆ.

ನರೇಂದ್ರ ಮೋದಿ ಅವರು 2014ರಲ್ಲಿ ಅಧಿಕಾರ ವಹಿಸಿಕೊಂಡರು. ಬಳಿಕ, ಯಾವುದೇ ರಜೆ ತೆಗೆದುಕೊಂಡಿಲ್ಲ. 9 ವರ್ಷಗಳಿಂದ ನಿರಂತರವಾಗಿ ಕೆಲಸ ಮಾಡುತ್ತಿದ್ದಾರೆ. ಅಷ್ಟೇ ಅಲ್ಲ, ಕಳೆದ 9 ವರ್ಷಗಳಲ್ಲಿ ಮೋದಿ ಅವರು ದೇಶ ಹಾಗೂ ವಿದೇಶಗಳಲ್ಲಿ 3 ಸಾವಿರಕ್ಕೂ ಹೆಚ್ಚು ಸಮಾರಂಭಗಳಲ್ಲಿ ಭಾಗವಹಿಸಿದ್ದಾರೆ ಎಂದು ಪಿಎಂಒ ಹೇಳಿದೆ.

20 ವರ್ಷದಲ್ಲಿ ರಜೆಯೇ ಇಲ್ಲ

ನರೇಂದ್ರ ಮೋದಿ ಅವರು ಗುಜರಾತ್ ಮುಖ್ಯಮಂತ್ರಿಯಾಗಿ ಮತ್ತು ಭಾರತದ ಪ್ರಧಾನ ಮಂತ್ರಿಯಾಗಿ 20 ವರ್ಷಗಳನ್ನು ಪೂರ್ಣಗೊಳಿಸಿದ್ದಾರೆ. ಈ 20 ವರ್ಷಗಳಿಂದ ಮೋದಿ ಅವರು ಒಂದೇ ಒಂದು ರಜೆಯನ್ನು ತೆಗೆದುಕೊಂಡಿಲ್ಲ. 24 ಗಂಟೆಗಳ ಕಾಲ ದೇಶಕ್ಕಾಗಿ ದುಡಿಯುತ್ತಿದ್ದಾರೆ ಎಂದು ಸ್ವತಃ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಹೇಳಿದ್ದರು.

ಮಾಹಿತಿ ಪಡೆದಿದ್ದು ಯಾರು?

ಪುಣೆ ಮೂಲದ ಆರ್​ಟಿಐ ಕಾರ್ಯಕರ್ತ ಪ್ರಫುಲ್ಲ ಶಾರದಾ ಈ ಮಾಹಿತಿ ಪಡೆದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು 2014ರಲ್ಲಿ ಅಧಿಕಾರ ವಹಿಸಿಕೊಂಡ ನಂತರ ಎಷ್ಟು ದಿನಗಳಲ್ಲಿ ಕಚೇರಿಯಲ್ಲಿ ತಮ್ಮ ಹಾಜರಾತಿಯನ್ನು ನೋಂದಾಯಿಸಿದ್ದಾರೆ ಎಂದು ಆರ್‌ಟಿಐ ಮೂಲಕ ಪ್ರಧಾನಿ ಕಚೇರಿಯಿಂದ ಮಾಹಿತಿ ಕೇಳಿದ್ದರು.

ಸದ್ಯ, ಈ ಆರ್​ಟಿಐ ಕಾಪಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಹಲವು ರಾಜಕಾರಣಿಗಳು ಇದನ್ನು ಟ್ವೀಟ್​ ಮಾಡಿ ‘ನಮ್ಮ ಪ್ರಧಾನಿ, ನಮ್ಮ ಹೆಮ್ಮೆ’ ಎಂದು ಬರೆದುಕೊಂಡಿದ್ದಾರೆ.

RELATED ARTICLES

Related Articles

TRENDING ARTICLES