ಧಾರವಾಡ : ಸಚಿವರ ಕಾರ್ಯವೈಖರಿಗೆ ಬೇಸತ್ತು ಕಾಂಗ್ರೆಸ್ ಶಾಸಕ ಬಸವರಾಜ ರಾಯರೆಡ್ಡಿ ನೇತೃತ್ವದಲ್ಲಿ ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಠಿಸಿತ್ತು. ಈ ಬಗ್ಗೆ ಶಾಸಕ ಬಸವರಾಜ ರಾಯರೆಡ್ಡಿ ಸದ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಧಾರವಾಡದಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರೋದು ನಿಜ. ಸೆಪ್ಟೆಂಬರ್ 5ರಂದು ಇಂಧನ ಸಚಿವರು ಸಭೆ ಕರೆದಿದ್ದಾರೆ. ನನ್ನ ಪತ್ರದಿಂದ ಈಗ ಇಡೀ ಜೆಸ್ಕಾಂ ಸಮಸ್ಯೆ ಪರಿಹಾರ ಆಗುತ್ತದೆ. ನನಗೆ ಕಾಂಗ್ರೆಸ್ ಬಗ್ಗೆ ಕೋಪವಿಲ್ಲ, ಸಿಟ್ಟಾಗುವಂತಹದ್ದು ಏನೂ ಆಗಿಲ್ಲ ಎಂದು ಹೇಳಿದ್ದಾರೆ.
ನಾನು ಕಾಂಗ್ರೆಸ್ ಪಕ್ಷವನ್ನು ಬಿಡುವುದಿಲ್ಲ. ಆದ್ರೆ, ಬಿಜೆಪಿಗೆ ಹೋಗಲು ನನಗೆ ತೊಂದರೆಯೂ ಇಲ್ಲ. ಇದಕ್ಕಾಗಿ ಎರಡ್ಮೂರು ಸಲ ಸಚಿವ ಎಂ.ಬಿ. ಪಾಟೀಲರಿಗೆ ನೆನಪು ಮಾಡಿದ್ದೇನೆ. ಆದ್ರೆ, ಪ್ರತಿಕ್ರಿಯೆ ಬಂದಿಲ್ಲ. ಹೀಗಾಗಿ ಸಿಎಂಗೆ ಪತ್ರ ಬರೆಯಬೇಕಾಯ್ತು ಎಂದು ತಿಳಿಸಿದ್ದಾರೆ.
ಸರಿಯಾಗಿ ಸ್ಪಂದನೆ ಸಿಗುತ್ತಿಲ್ಲ
ಕೊಪ್ಪಳ ಜಿಲ್ಲೆಯಲ್ಲಿ ಬರಗಾಲ ಆವರಿಸಿದೆ. ಈ ಸಮಯದಲ್ಲಿ ವಿದ್ಯುತ್ ಸರಿಯಾಗಿ ಸಿಗುತ್ತಿಲ್ಲ. ಟ್ರಾನ್ಸಫರ್‌ಗಳು ಬರ್ನ್ ಆಗುತ್ತಿವೆ. ಆದರೆ, ಸರಿಯಾಗಿ ಸ್ಪಂದನೆ ಸಿಗುತ್ತಿಲ್ಲ. ಕಲಬುರಗಿಯ ಜಿಸ್ಕಾಂ ವ್ಯಾಪ್ತಿಗೆ ನಮ್ಮ ಜಿಲ್ಲೆ ಬರುತ್ತದೆ. ಆದರೆ, ಯಾವ ಅಧಿಕಾರಿಗಳು ಜಿಲ್ಲೆಗೆ ಬರುತ್ತಿಲ್ಲ. ಹೀಗಾಗಿ, ಸಿಎಂಗೆ ಸಭೆ ಮಾಡಿ ಅಂತ ಪತ್ರ ಬರೆದಿದ್ದೇನೆ ಎಂದು ಹೇಳಿದ್ದಾರೆ.