Monday, December 23, 2024

ಸನಾತನಧರ್ಮದ ಕುರಿತ ಸ್ಟಾಲಿನ್ ಪುತ್ರನ ಹೇಳಿಕೆಗೆ ಪೇಜಾವರ ಶ್ರೀ ಖಂಡನೆ!

ಉಡುಪಿ: ಸನಾತನಧರ್ಮ ವಿರುದ್ಧ ತಮಿಳುನಾಡಿನ ಯುವಜನ ಮತ್ತು ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್ ನೀಡಿರುವ ಹೇಳಿಕೆಯನ್ನು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಖಂಡಿಸಿದ್ದಾರೆ.

ಇದನ್ನೂ ಓದಿ:  ಸನಾತನಧರ್ಮ ಮಲೇರಿಯಾ, ಡೆಂಘೆ ಇದ್ದಂತೆ: ಉದಯನಿಧಿ ಸ್ಟಾಲಿನ್​​

ಈ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಮಂತ್ರಿಯಾಗಿ ಜವಾಬ್ದಾರಿಯುತ ಸ್ಥಾನದಲ್ಲಿರುವ ಉದಯನಿಧಿ ಸಮಾಜದಲ್ಲಿ ಇಂಥ ವಿಷಬೀಜ ಬಿತ್ತುವುದು ಸರಿಯಲ್ಲ ಎಂದಿದ್ದಾರೆ. ಸನಾತನ ಎಂದರೆ ಸದಾ ಕಾಲವೂ ಇರುವಂತಹದ್ದು ಎಂದರ್ಥ.

ಎಲ್ಲರೂ ಸುಖವಾಗಿ ಬದುಕಲು ಅಳವಡಿಸಿಕೊಳ್ಳುವ ಸೂತ್ರವೇ ಧರ್ಮ, ನಮ್ಮ ಸುಖದಿಂದ ಅಕ್ಕಪಕ್ಕದವರಿಗೆ ದುಃಖವಾಗಬಾರದು, ಬದಲಾಗಿ ನಮ್ಮ ಸುಖದಿಂದ ಅಕ್ಕಪಕ್ಕದವರಿಗೂ ಸುಖವಾಗಬೇಕು ಎನ್ನುತ್ತದೆ ಸನಾತನ ಧರ್ಮ. ಅಂತಹ ಧರ್ಮವನ್ನು ನಿರ್ಮೂಲನೆ ಮಾಡಬೇಕು ಎನ್ನುವ ಪ್ರವೃತ್ತಿ ಸರಿಯಲ್ಲ ಎಂದು ಮೈಸೂರಲ್ಲಿ ಚಾತುರ್ಮಾಸ ವ್ರತದಲ್ಲಿರುವ ಶ್ರೀಗಳು ವಿಡಿಯೋ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸನಾತನಧರ್ಮ ಮಲೇರಿಯಾ,ಡೇಂಘಿ ಇದ್ದಂತೆ :

ಇತ್ತೀಚೆಗೆ ತಮಿಳುನಾಡಿನ ಯುವ ಕ್ರೀಡಾ ಸಚಿವ ಯುವನಿಥಿ ಸ್ಟಾಲಿನ್​ ಕಾರ್ಯಕ್ರಮವೊಂದರಲ್ಲಿ ಸನಾತನಧರ್ಮ ಒಂದು ಮಲೇರಿಯಾ, ಡೇಂಗಿ ಇದ್ದಂತೆ, ಕೆಲವೊಂದು ವಿಚಾರಗಳನ್ನು ಕೇವಲ ವಿರೋಧಿಸಿದರೆ ಸಾಲದು, ಅವುಗಳನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕು. ನಾವು ಡೆಂಘೆ, ಮಲೇರಿಯಾ ಅಥವಾ ಕರೊನಾವನ್ನು ವಿರೋಧ ಮಾಡಬಾರದು, ಅವುಗಳನ್ನು ಶಾಶ್ವತವಾಗಿ ತೊಡೆದುಹಾಕಬೇಕು. ಅದರಂತೆ ಸನಾತನವನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿಕೆ ನೀಡಿದ್ದರು.

RELATED ARTICLES

Related Articles

TRENDING ARTICLES