Thursday, January 23, 2025

ನಾನು ಆ ಹೆಣ್ಣು ಮಗಳ ಜೊತೆ ರಾಜಕೀಯ ಚರ್ಚೆ ಮಾಡಿಲ್ಲ : ಡಿಕೆಶಿ ಸ್ಪಷ್ಟನೆ

ಬೆಂಗಳೂರು : ತೇಜಸ್ವಿನಿ ಅನಂತ್ ಕುಮಾರ್ ಜೊತೆ ರಾಜಕೀಯ ಕುರಿತು ಚರ್ಚೆ ಮಾಡಲಾಯಿತು ಎಂಬ ಟ್ವೀಟ್ ಪೋಸ್ಟ್ ವಿಚಾರವಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನಾನು ಆ ಹೆಣ್ಣು ಮಗಳ ಜೊತೆ ಯಾವುದೇ ರಾಜಕೀಯ ವಿಚಾರ ಚರ್ಚೆ ಮಾಡಿಲ್ಲ. ದಯಮಾಡಿ ನಾನು ಕ್ಷಮೆ ಕೇಳ್ತೀನಿ ಎಂದು ಹೇಳಿದ್ದಾರೆ.

ನಾನು ಯಾವುದೇ ರಾಜಕೀಯ ವಿಚಾರ ಚರ್ಚೆ ಮಾಡಿಲ್ಲ. ಅನಂತ್ ಕುಮಾರ್ ಕಾರ್ಯಕ್ರಮ ಬಗ್ಗೆ ಚರ್ಚೆ ಮಾಡಿದ್ರು. ಆ ರೀತಿ ಟ್ವೀಟ್ ಆಗಿದ್ರೆ ಕ್ಷಮೆ ಇರಲಿ. ನನ್ನ ಹೆಸರಲ್ಲಿ ಟ್ವೀಟ್ ಮಾಡಿದ್ರೆ, ಮಾಡಿದವರನ್ನು ಕೂಡಲೇ ತೆಗೆದುಹಾಕ್ತೀನಿ ಎಂದು ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

ಟ್ವೀಟ್​ನಲ್ಲಿ ಏನಿತ್ತು?

ಇಂದು ತೇಜಸ್ವಿನಿ ಅನಂತ್ ಕುಮಾರ್ ಅವರು ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದರು. ಈ ಬಗ್ಗೆ ಡಿಕೆಶಿ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದೆ. ‘ಬಿಜೆಪಿಯ ಹಿರಿಯ ನಾಯಕರಾಗಿದ್ದ ದಿ.ಅನಂತ್ ಕುಮಾರ್ ಅವರ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಅವರು ಇಂದು ನನ್ನನ್ನು ಕುಮಾರ ಕೃಪಾ ಅತಿಥಿ ಗೃಹದಲ್ಲಿ ಭೇಟಿಯಾದರು. ಈ ವೇಳೆ ರಾಜ್ಯ ರಾಜಕೀಯ ವಿಚಾರಗಳ ಕುರಿತು ಚರ್ಚಿಸಿದರು’ ಎಂದು ಪೋಸ್ಟ್ ಮಾಡಲಾಗಿತ್ತು.

RELATED ARTICLES

Related Articles

TRENDING ARTICLES