Thursday, December 19, 2024

ಇಂದು 6 ರಾಜ್ಯಗಳಲ್ಲಿ ವಿಧಾನಸಭಾ ಉಪಚುನಾವಣೆ: ಮತದಾನ ಆರಂಭ !

ದೆಹಲಿ : ದೇಶದ 6 ರಾಜ್ಯಗಳಲ್ಲಿ 7 ವಿಧಾನಸಭಾ ಕ್ಷೇತ್ರಗಳಲ್ಲಿ ವಿಧಾನಸಭಾ ಉಪ ಚುನಾವಣೆ ನಡೆಯುತ್ತಿದ್ದು ಮತದಾನ ಸುಸೂತ್ರವಾಗಿ ನಡೆಯುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಉತ್ತರಪ್ರದೇಶ, ಪಶ್ಚಿಮ ಬಂಗಾಳ, ಕೇರಳ, ಉತ್ತರಾಖಂಡ, ಜಾರ್ಖಾಂಡ್​, ತ್ರಿಪುರ ರಾಜ್ಯಗಳಲ್ಲಿ ಇಂದು ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು ಸಂಜೆ 5 ಗಂಟೆಯವರೆಗೆ ನಡೆಯಲಿದೆ.

ಇದನ್ನೂ ಓದಿ: ಉದಯನಿಧಿ ತಲೆ ತಂದವರಿಗೆ 10ಕೋಟಿ ಘೋಷಿಸಿದ ಸ್ವಾಮೀಜಿ!

ಉತ್ತರಪ್ರದೇಶದ ಘೋಸಿ, ಪಶ್ಚಿಮ ಬಂಗಾಳದ ಧುಗ್ಗುರಿ, ಕೇರಳದ ಪುತುಪಲ್ಲಿ, ಉತ್ತರಾಖಂಡದ ಬಾಗೇಶ್ವರ್, ಜಾರ್ಖಂಡ್‌ನ ದುಮ್ಮಿ, ತ್ರಿಪುರಾದ ಬಾಕ್ಸ್‌ನಗ‌ ಮತ್ತು ದಾಂಪುರ ವಿಧಾನಸಭೆ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯುತ್ತಿದ್ದು ಮತದಾನ ಕೇಂದ್ರಗಳಲ್ಲಿ ಪೊಲೀಸ್ ಬಿಗಿಭದ್ರತೆ ಎರ್ಪಡಿಸಲಾಗಿದೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಂದು ನಡೆಯುತ್ತಿರುವ ಈ ಎಲ್ಲ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಇದೇ ಸೆ.8ರಂದು ಪ್ರಕಟವಾಗಲಿದೆ.

INDIA ವಿರೋಧ ಪಕ್ಷಗಳ ಮೈತ್ರಿಕೂಟಗಳ ನಂತರ ಇದೇ ಮೊದಲ ಬಾರಿಗೆ ವಿಧಾನಸಭಾ ಚುನಾವಣೆಯನ್ನು ಎದುರಿಸುತ್ತಿದ್ದು ಈ ಚುನಾವಣೆಯ ಫಲಿತಾಂಶವು ಮುಂದಿನ ಲೋಕಸಭಾ ಚುನಾವಣೆಯ ಮೇಲೆ ಭಾರಿ ನಿರೀಕ್ಷೆಯನ್ನ ಹುಟ್ಟುಹಾಕಿದೆ.

RELATED ARTICLES

Related Articles

TRENDING ARTICLES