Wednesday, January 22, 2025

ಸಾವಿನಲ್ಲೂ ಒಂದಾದ ಅಣ್ಣ-ತಂಗಿ

ಬೆಳಗಾವಿ : ಬೈಕ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ, ಅಣ್ಣ-ತಂಗಿ ಇಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಲಿಕವಾಡ ಗ್ರಾಮದ ಬಳಿ ನಡೆದಿದೆ.

ಪ್ರಶಾಂತ ನಾಗರಾಜ ತುಳಸಿಕಟ್ಟಿ (21) ಹಾಗೂ ಪ್ರಿಯಾಂಕ ನಾಗರಾಜ ತುಳಸಿಕಟ್ಟಿ (19) ಮೃತ ದುರ್ದೈವಿಗಳು. ಮೃತರು ಚಿಕ್ಕೋಡಿ ತಾಲೂಕಿನ ಸದಲಗಾ ಪಟ್ಟಣದ ನಿವಾಸಿಗಳು ಎಂದು ತಿಳಿದುಬಂದಿದೆ.

ಅಪಘಾತದಲ್ಲಿ ಕಾರು ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಹೋದರ ಮೃತಪಟ್ಟಿದ್ದಾನೆ. ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ತಂಗಿ ಪ್ರಿಯಾಂಕ ಕೊನೆಯುಸಿರೆಳೆದಿದ್ದಾಳೆ. ಆ ಮೂಲಕ ಸಾವಿನಲ್ಲೂ ಈ ಸಹೋದರ-ಸಹೋದರಿಯರು ಒಂದಾಗಿದ್ದಾರೆ.

ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಸದಲಗಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

Related Articles

TRENDING ARTICLES