ನವದೆಹಲಿ : ಸೆಪ್ಟೆಂಬರ್ 18 ರಿಂದ 22 ರವರೆಗೆ ಐದು ದಿನಗಳಕಾಲ ನಡೆಯಲಿರುವ ವಿಶೇಷ ಸಂಸತ್ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು INDIA ವನ್ನು ‘ಭಾರತ್’ ಎಂದು ಮರುನಾಮಕರಣ ಮಾಡುವ ನಿರ್ಣಯ ಮಂಡಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ವಿಶೇಷ ಸಂಸತ್ ಅಧಿವೇಶನದಲ್ಲಿ ಪ್ರಶ್ನೋತ್ತರ ಸಮಯ, ಶೂನ್ಯ ಸಮಯ ಮತ್ತು ಖಾಸಗಿ ಸದಸ್ಯರ ವ್ಯವಹಾರ ಇರುವುದಿಲ್ಲ. ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ ನಡೆಯುವ ಅಧಿವೇಶನಗಳಿಗೆ ಇದನ್ನು ನಿರ್ವಹಿಸಲಾಗುತ್ತದೆ.
ಇದನ್ನೂ ಓದಿ: ಸೆ.7 ಕ್ಕೆ ರಾಜ್ಯಾದ್ಯಂತ ಪಾದಯಾತ್ರೆಗೆ ಮುಂದಾದ ಕಾಂಗ್ರೆಸ್!
2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವ ನಿಟ್ಟಿನಲ್ಲಿ ವಿರೋಧ ಪಕ್ಷಗಳು ರಚಿಸಿಕೊಂಡಿರುವ ಮೈತ್ರಿಕೂಟಕ್ಕೆ INDIA ಎಂದು ಹೆಸರಿಟ್ಟಿರುವುದರಿಂದ ದೇಶದ ಹೆಸರನ್ನು ಭಾರತ್ ಎಂದು ಮರು ನಾಮಕರಣ ಮಾಡಲು ಪ್ರಧಾನಿ ಮುಂದಾಗಿದ್ದಾರೆ ಎನ್ನುವ ಚರ್ಚೆ ಎಲ್ಲೆಡೆ ನಡೆಯುತ್ತಿದೆ.