Thursday, January 23, 2025

ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ!

ಬೆಂಗಳೂರು : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಉನ್ನತ ಶಿಕ್ಷಣ ಇಲಾಖೆ ಜಂಟಿಯಾಗಿ ಭಾರತ ರತ್ನ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನವನ್ನು ಆಚರಿಸಲಾಯಿತು.

ಶಿಕ್ಷಕರ ದಿನಾಚರಣೆ ಅಂಗವಾಗಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ಇದೇ ವೇಳೆ ಶಿಕ್ಷಕರ ದಿನಾಚರಣೆ ಅಂಗವಾಗಿ ರಾಜ್ಯದ 43 ಮಂದಿ ಶಿಕ್ಷಕರುಗಳಿಗೆ ಪ್ರಶಸ್ತಿ ಪ್ರದಾನವನ್ನು ಸಿಎಂ ಮಾಡಿದರು.

ಇದನ್ನೂ ಓದಿ: INDIA ಹೆಸರನ್ನು BHARATH​ ಎಂದು ಬದಲಿಸಲು ಮಂದಾದ ಕೇಂದ್ರ ಸರ್ಕಾರ!

ಶಾಸಕ ರಿಜ್ವಾನ್ ಅರ್ಷದ್ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಸಚಿವರಾದ ಎಸ್.ಮಧು ಬಂಗಾರಪ್ಪ, ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ.ಸುಧಾಕರ್ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಈ ವೇದಿಕೆಯಲ್ಲಿ ಹಲವು ಹಾಲಿ, ಮಾಜಿ ಶಾಸಕರು, ವಿಧಾನ ಪರಿಷತ್ ಸದಸ್ಯರು ಮತ್ತು  ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES

Related Articles

TRENDING ARTICLES