ಬೆಂಗಳೂರು : I.N.D.I.A ಹೆಸರನ್ನು ‘ಭಾರತ’ ಎಂದು ಬದಲಿಸಿದರೆ ದೇಶ ಬದಲಾಗಲಿದೆಯೇ? ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕುಟುಕಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಅವರೇ ಬದಲಾಗಬೇಕಿರುವುದು ದೇಶದ ಹೆಸರಲ್ಲ, ಬದಲಿಗೆ ದೇಶದ ಪರಿಸ್ಥಿತಿ ಎಂದು ಛೇಡಿಸಿದ್ದಾರೆ.
ಹೆಸರು ಬದಲಾಯಿಸುವ ಬದಲು ಜನರ ಜೀವನ ಮಟ್ಟ ಬದಲಾಯಿಸಿ. ದ್ವೇಷದ ಮೂಲಕ ಸಮಾಜದ ಶಾಂತಿ ಕೆಡಿಸುತ್ತಿರುವ ನಿಮ್ಮ ಭಕ್ತರ ಮನಸ್ಸು ಬದಲಾಯಿಸಿ. ಈ ದೇಶವನ್ನು ಸರ್ವಜನಾಂಗದ ಶಾಂತಿಯ ತೋಟವಾಗಿ ಬದಲಾಯಿಸಿ. ದ್ವೇಷದ ಮೂಲಕ ಸಮಾಜದ ಶಾಂತಿ ಕೆಡಿಸುತ್ತಿರುವ ನಿಮ್ಮ ಭಕ್ತರ ಮನಸ್ಸು ಬದಲಾಯಿಸಿ. ಈ ದೇಶವನ್ನು ಸರ್ವಜನಾಂಗದ ಶಾಂತಿಯ ತೋಟವಾಗಿ ಬದಲಾಯಿಸಿ ಎಂದು ಚಾಟಿ ಬೀಸಿದ್ದಾರೆ.
ಭಯವಲ್ಲದೆ ಮತ್ತೇನು ಕಾರಣ?
ವಿರೋಧ ಪಕ್ಷಗಳ ಮೈತ್ರಿಕೂಟಕ್ಕೆ I.N.D.I.A ಎಂಬ ಹೆಸರಿಟ್ಟ ಕಾರಣಕ್ಕೆ ಕೇಂದ್ರ ಸರ್ಕಾರ ದೇಶದ ಹೆಸರನ್ನು I.N.D.I.Aದ ಬದಲು ‘ಭಾರತ’ ಎಂದು ಬದಲಾಯಿಸಲು ಮುಂದಾಗಿದೆ. I.N.D.I.A ಮೈತ್ರಿಕೂಟದ ಬಗ್ಗೆ ಬಿಜೆಪಿಯವರಿಗೆ ಇಷ್ಟೊಂದು ಭಯವೆ? ದೇಶದ ಹೆಸರು ಮರುನಾಮಕರಣಕ್ಕೆ I.N.D.I.A ಮೈತ್ರಿಕೂಟದ ಮೇಲಿನ ಭಯವಲ್ಲದೆ ಮತ್ತೇನು ಕಾರಣ ಮೋದಿಯವರೆ? ಎಂದು ಪ್ರಶ್ನಿಸಿದ್ದಾರೆ.
ಭಾರತ ಎದೆಯೊಳಗೆ ಅಜರಾಮರ
I.N.D.I.A ಮತ್ತು ಭಾರತ ಎರಡೂ ಹೆಸರುಗಳು ನಮ್ಮ ಎದೆಯೊಳಗೆ ಅಜರಾಮರವಾಗಿವೆ. ಇಂಡಿಯಾ ಎಂದರೆ ಬೇರೆಯಲ್ಲ, ಭಾರತ ಎಂದರೆ ಬೇರೆಯಲ್ಲ. ಸದುದ್ದೇಶದಿಂದ I.N.D.I.A ಬದಲು ಭಾರತ ಎಂದು ಮರುನಾಮಕರಣ ಮಾಡಿದರೆ ಆಕ್ಷೇಪಣೆಯಿಲ್ಲ. ಆದರೆ, ವಿರೋಧ ಪಕ್ಷಗಳ ಒಕ್ಕೂಟ I.N.D.I.A ಹೆಸರನ್ನು ಅಪ್ರಸ್ತುತಗೊಳಿಸಲು ದೇಶದ ಹೆಸರು ಬದಲಾಯಿಸಲು ಹೊರಟಿರುವುದು ಮೂರ್ಖತನ ಎಂದು ವಾಗ್ದಾಳಿ ನಡೆಸಿದ್ದಾರೆ.
1
ವಿರೋಧ ಪಕ್ಷಗಳ ಮೈತ್ರಿಕೂಟಕ್ಕೆ 'INDIA' ಎಂಬ ಹೆಸರಿಟ್ಟ ಕಾರಣಕ್ಕೆ ಕೇಂದ್ರ ಸರ್ಕಾರ ದೇಶದ ಹೆಸರನ್ನು 'INDIA'ದ ಬದಲು 'ಭಾರತ' ಎಂದು ಬದಲಾಯಿಸಲು ಮುಂದಾಗಿದೆ.#INDIA ಮೈತ್ರಿಕೂಟದ ಬಗ್ಗೆ BJPಯವರಿಗೆ ಇಷ್ಟೊಂದು ಭಯವೆ?ದೇಶದ ಹೆಸರು ಮರುನಾಮಕರಣಕ್ಕೆ 'INDIA' ಮೈತ್ರಿಕೂಟದ ಮೇಲಿನ ಭಯವಲ್ಲದೆ ಮತ್ತೇನು ಕಾರಣ ಮೋದಿಯವರೆ?
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) September 5, 2023