ತುಮಕೂರು : ಹಿಂದೂ ಧರ್ಮದ ಬಗ್ಗೆ ಲಘುವಾಗಿ ಹೇಳಿಕೆ ಹರಿಬಿಡುವ ಮೂಲಕ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ.
ತುಮಕೂರು ಜಿಲ್ಲೆ ಕೊರಟಗೆರೆಯಲ್ಲಿ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ವೇಳೆ ಸನಾತನ ಧರ್ಮದ ವಿಚಾರ ಕುರಿತು ಅವರು ಮಾತನಾಡಿದ್ದಾರೆ.
‘ಹಿಂದೂ ಧರ್ಮ ಯಾವಾಗ ಹುಟ್ಟಿತು? ಯಾರು ಹುಟ್ಟಿಸಿದ್ದರು ಎಂಬುದೇ ಪ್ರಶ್ನೆ. ಪ್ರಪಂಚದ ಇತಿಹಾಸದಲ್ಲಿ ಅನೇಕ ಧರ್ಮಗಳು ಹುಟ್ಟಿಕೊಂಡಿವೆ. ಹಿಂದೂ ಧರ್ಮ ಯಾರು ಹುಟ್ಟುಹಾಕಿದ್ರು ಎಂಬುದೇ ಇನ್ನೂ ಪ್ರಶ್ನೆಯಾಗಿ ಉಳಿದಿದೆ’ ಎಂದು ಹೇಳಿದ್ದಾರೆ.
ಇದನ್ನೂ ಓದಿ : ನಾನು ಸನಾತನ ಧರ್ಮಕ್ಕೆ ಹುಟ್ಟಿಲ್ಲ, ನಮ್ಮ ಅಪ್ಪನಿಗೆ ಹುಟ್ಟಿದ್ದೇನೆ : ಪ್ರಕಾಶ್ ರೈ
ನಮ್ಮ ದೇಶದಲ್ಲಿ ಬೌದ್ಧ ಧರ್ಮ ಮತ್ತು ಜೈನ ಧರ್ಮ ಹುಟ್ಟಿರುವ ಇತಿಹಾಸವಿದೆ. ವಿದೇಶದಿಂದ ಇಸ್ಲಾಂ ಮತ್ತು ಕ್ರೈಸ್ತ ಧರ್ಮಗಳು ನಮ್ಮ ದೇಶಕ್ಕೆ ಬಂದಿದೆ. ಪ್ರಪಂಚದ ಎಲ್ಲಾ ಧರ್ಮಗಳ ಸಾರಾಂಶ ಒಂದೇ ಮನುಕುಲಕ್ಕೆ ಒಳ್ಳೆದಾಗಲಿ ಎಂಬುದು ಎಂದು ಪರಮೇಶ್ವರ್ ತಿಳಿಸಿದ್ದಾರೆ.