Wednesday, January 22, 2025

ಇದಾವುದು ಹೊಸ ಧರ್ಮ? ಸನಾತನ? : ನಟ ಕಿಶೋರ್

ಬೆಂಗಳೂರು : ಸನಾತನ ಧರ್ಮದ ಬಗ್ಗೆ ಹೇಳಿಕೆ ನೀಡಿದ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ ತಲೆ ಕಡಿಯಬೇಕು ಎಂದಿರುವ ಅಯೋಧ್ಯೆ ಸ್ವಾಮಿ ವಿರುದ್ಧ ನಟ ಕಿಶೋರ್ ಕುಮಾರ್ ಕಿಡಿಕಾರಿದ್ದಾರೆ.

ಮನುಷ್ಯರನ್ನು ಮನುಷ್ಯರಾಗಿ ಕಾಣುವ ಮನುಷ್ಯ ಧರ್ಮದವರಾಗೋಣ. ವಿಶ್ವಮಾನವರಾಗೋಣ ಎಂದು ಅವರು ಹೇಳಿದ್ದಾರೆ. ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಅವರು, ಇನ್ನೂ ದಿನ ಹಿಂದೂ ಹಿಂದೂ ಎಂದು ಅರಚುತಿದ್ದವರೆಲ್ಲ ಯಾಕೋ ಆ ಪದ ಬಿಟ್ಟೇ ಬಿಟ್ಟರೆನಿಸುತ್ತಿಲ್ಲವೇ ಎಂದು ಪ್ರಶ್ನಿಸಿದ್ದಾರೆ. ಹಾಗಾದರೆ ನಾವೆಲ್ಲಾ ಹಿಂದೂ ಧರ್ಮದವರಲ್ಲವೇ ಎಂದು ಕೇಳಿರುವ ಅವರು, ಇದಾವುದು ಹೊಸ ಧರ್ಮ? ಸನಾತನ? ಎಂದು ಪ್ರಶ್ನಿಸಿದ್ದಾರೆ.

ವಾಟ್ಸ್​ಆ್ಯಪ್ ವಿವಿಯಿಂದ ಹೊರ ಬನ್ನಿ

‘ಕೆಲಸ ಮಾಡಲು ಯೋಗ್ಯತೆಯಿಲ್ಲದ ಈ ಪದಗಳ ರಾಜಕೀಯ ಲಾಭ ಪಡೆಯಲು ತುದಿಗಾಲಲ್ಲಿ ನಿಂತಿರುವವರನ್ನು ಇದರ ಸಂಪೂರ್ಣ ನಿಖರ ಅರ್ಥ ಹೇಳಲು ಕೇಳಿಬಿಡಿ ಸಾಕು. ವಾಟ್ಸ್​ಆ್ಯಪ್ ವಿಶ್ವವಿದ್ಯಾಲಯದಿಂದ ಹೊರಬಂದು, ಹಿಂದೂ ಪದದ ನಿಜ ಅರ್ಥ ತಿಳಿಯುವುದು ಮುಖ್ಯ. ದ್ವೇಷದ ರಾಜಕೀಯ ಪ್ರಚಲಿತವಾಗುತ್ತಿದ್ದಂತೆ ಅದನ್ನು ಬಿಟ್ಟು ಸನಾತನ ಪದ ಹಿಡಿದ ದೇಶದ ನರ್ತಕರು ಅದನ್ನೂ ರಾಜಕೀಯ ಲಾಭಕ್ಕಾಗಿ ಬಳಸಿದ್ದೇ ಈ ಅನಾವಶ್ಯಕ ಚರ್ಚೆಗೆ ಕಾರಣ’ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಮುಕ್ತವೆಂದು ತಿರುಗಾಟ

ಅದನ್ನು ಸನಾತನಿಗಳ ಮಾರಣಹೋಮಕ್ಕೆ ಹೋಲಿಸಿದ ಇವರ ದ್ವೇಷದ ವಕ್ತಾರನಿಗೆ ಇವರ ಪಕ್ಷದ ಪ್ರಧಾನಿ ಊರಲ್ಲೆಲ್ಲ ಕಾಂಗ್ರೆಸ್ ಮುಕ್ತವೆಂದು ಕೂಗಾಡುತ್ತ ತಿರುಗಿದಾಗ ಕಾಂಗ್ರೆಸಿಗರ ಮಾರಣಹೋಮಕ್ಕೆ ಕರೆ ನೀಡಿದ್ದರೇ ಕೇಳಬೇಕಲ್ಲ ಎಂದು ಕುಟುಕಿದ್ದಾರೆ.

RELATED ARTICLES

Related Articles

TRENDING ARTICLES