ಬೆಂಗಳೂರು : ಗೌರಿ ಲಂಕೇಶ್ ನೆನಪಿನಲ್ಲಿ ಬೆಂಗಳೂರಿನಲ್ಲಿ ಗೌರಿ ನೆನಪು ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.
ಗೌರಿ ಮೆಮೋರಿಯಲ್ ಟ್ರಸ್ಟ್ ವತಿಯಿಂದ ಟೌನ್ಹಾಲ್ನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಹಲವು ಪ್ರಮುಖರು ಭಾಗವಹಿಸಿದ್ದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಿದ್ದರು. ಸರ್ವಾಧಿಕಾರದ ಕಾಲದಲ್ಲಿ ಭಾರತವನ್ನು ಮರುಕಟ್ಟುವ ಕುರಿತು ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಇದನ್ನೂ ಓದಿ: ಹಿಂದೂ ಧರ್ಮ ಯಾವಾಗ ಹುಟ್ಟಿತು? ಯಾರು ಹುಟ್ಟಿಸಿದ್ದರು? : ಡಾ.ಜಿ. ಪರಮೇಶ್ವರ್
ಈ ಕಾರ್ಯಕ್ರಮದಲ್ಲಿ ರೈತ ಮುಖಂಡ ರಾಕೇಶ್ ಟಿಕಾಯಿತ್, ನಟ ಪ್ರಕಾಶ್ ರಾಜ್, ಉಡುಪಿ ಮುಸ್ಲಿಂ ಒಕ್ಕೂಟದ ಮುಖಂಡ ಯಾಸಿನ್ ಮಲ್ಪೆ, ಕವಿತಾ ಲಂಕೇಶ್, ಟಿಎನ್ ಸೀತಾರಾಂ, ಬಿಟಿ ಲಲಿತಾ ನಾಯಕ್, ಹೋರಾಟಗಾರ್ತಿ ತೀಸ್ತಾ ಸೆಟಲ್ ವಾದ್ ಸೇರಿದಂತೆ ಅನೇಕ ಹೋರಾಟಗಾರರು ಭಾಗಿಯಾಗಿದ್ದರು.