Monday, December 23, 2024

ಶವಯಾತ್ರೆಗೆ ಹೆಗಲು ಕೊಟ್ಟ ಇನ್​ಸ್ಪೆಕ್ಟರ್ ಶಬ್ಬೀರ್

ಮೈಸೂರು : ಹುಲಿ ದಾಳಿಗೆ ಬಲಿಯಾಗಿದ್ದ ಬಾಲಕನ ಶವಯಾತ್ರೆಗೆ ಪೊಲೀಸ್ ಅಧಿಕಾರಿ ಹೆಗಲು ಕೊಟ್ಟಿದ್ದಾರೆ.

ಸೋಮವಾರ ಮೈಸೂರಿನ ಹೆಚ್.ಡಿ.ಕೋಟೆ ತಾಲೂಕಿನ ಕಲ್ಲಟ್ಟಿ ಗ್ರಾಮದಲ್ಲಿ ಹುಲಿ ಓರ್ವ ಬಾಲಕನನ್ನ ತಿಂದು ಹಾಕಿತ್ತು. ಈ ಹಿನ್ನೆಲೆ ಹೆಚ್.ಡಿ.ಕೋಟೆ ಸರ್ಕಲ್ ಇನ್​​ಸ್ಪೆಕ್ಟರ್ ಶಬ್ಬೀರ್ ಅಂತಿಮ ಸಂಸ್ಕಾರಕ್ಕೆ ತೆರಳಿದ್ದರು. ಈ ವೇಳೆ ಶಬ್ಬೀರ್ ಬಾಲಕನ ಶವಯಾತ್ರೆಯಲ್ಲಿ ಹೆಗಲು ಕೊಟ್ಟಿದ್ದಾರೆ. ಇನ್​​ಸ್ಪೆಕ್ಟರ್ ಶಬ್ಬೀರ್ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

ಟ್ರಕ್​​ನಲ್ಲಿ ಆಕಸ್ಮಿಕ ಬೆಂಕಿ

ಚಲಿಸುತ್ತಿದ್ದ ಟ್ರಕ್​​ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿರುವ ಘಟನೆ ಮೈಸೂರಿನ ಹೊರವಲಯದ ಬೋಗಾದಿ ರಿಂಗ್ ರಸ್ತೆಯಲ್ಲಿ ನಡೆದಿದೆ. ಮುಂಜಾನೆ 5 ಗಂಟೆ ಸಮಯದಲ್ಲಿ RJ296, A9882 ನೊಂದಣಿ ಸಂಖ್ಯೆ ಟ್ರಕ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಮಾಹಿತಿ ಅರಿತ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಟ್ರಕ್​​ನ ಮುಂಭಾಗ ಸಂಪೂರ್ಣ ಸುಟ್ಟು ಕರಕಲಾಗಿದೆ. ಸರಸ್ವತಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

RELATED ARTICLES

Related Articles

TRENDING ARTICLES