Thursday, December 19, 2024

ಕಾಮಿಡಿ ಕಿಲಾಡಿಗಳು ಖ್ಯಾತಿಯ ಚಂದ್ರಪ್ರಭ ವಿರುದ್ದ ಹಿಟ್​&ರನ್​ ಕೇಸ್​ ದಾಖಲು!

ಚಿಕ್ಕಮಗಳೂರು: ನಗರದಲ್ಲಿ ಭೀಕರ ಅಪಘಾತ ಪ್ರಕರಣ ನಡೆದಿದ್ದು ಕಾಮಿಡಿ ಕಿಲಾಡಿಗಳು ಖ್ಯಾತಿಯ ಚಂದ್ರಪ್ರಭ ಅವರ ವಿರುದ್ದ ಹಿಟ್​ ಅಂಡ್​ ರನ್​ ಕೇಸ್​ ದಾಖಲಾಗಿದೆ.

ಚಿಕ್ಕಮಗಳೂರು ತಾಲೂಕಿನ ನಾಗೇನಹಳ್ಳಿ ನಿವಾಸಿ ಮಾಲ್ತೇಶ್​ ಅಪಘಾತದಲ್ಲಿ ಗಂಭೀರ ಗಾಯಕ್ಕೊಳಗಾದ ವ್ಯಕ್ತಿ. ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಆಸ್ಪತ್ರೆಗೆ ರವಾನಿಸಲಾಗಿದೆ.

ಇದನ್ನೂ ಓದಿ: ವೇದಿಕೆ ಮೇಲೆ ಕಾಲು ಜಾರಿ ಬಿದ್ದ ಬಿಹಾರ್​​ ಸಿಎಂ

ಚಿಕ್ಕಮಗಳೂರು ನಗರದ ಕೆಎಸ್​ಆರ್​ಟಿಸಿ ಬಸ್​ ನಿಲ್ದಾಣದ ಹೈವೇ ರಸ್ತೆಯಲ್ಲಿ ದ್ವಿಚಕ್ರ ವಾಹನದ ಮೂಲಕ ಸಾಗುತ್ತಿದ್ದ ಮಾಲ್ತೇಶ್​ಗೆ ಅದೇ ಮಾರ್ಗದಲ್ಲಿ ವೇಗವಾಗಿ ಬಂದ KA 51 MD 9552 ರಿಜಿಸ್ಟ್ರೇಷನ್ ನಂಬರ್ ಹೊಂದಿರುವ ಕಾರು ಗುದ್ದಿದ್ದು ಕಾರನ್ನು ನಿಲ್ಲಸದೇ ಸ್ಥಳದಿಂದ ಪರಾರಿಯಾಗಿದ್ದಾರೆ, ಈ ಕಾರು ಕಾಮಿಡಿ ಕಿಲಾಡಿಗಳು ಖ್ಯಾತಿಯ ಚಂದ್ರಪ್ರಭಾ ಅವರಿಗೆ ಸೇರಿದ್ದು ಎನ್ನಲಾಗಿದೆ.

ಅಪಘಾತದಲ್ಲಿ ಗಂಭೀರ ಗಾಯಾಳಾಗಿರುವ ಮಾಲ್ತೇಶ್ ನ್ನು​ ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಘಟನೆ ಸಂಬಂಧ ಮಾಲ್ತೇಶ್​ ಸಂಬಂಧಿಕರಿಂದ ಚಿಕ್ಕಮಗಳೂರು ನಗರದ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲುಮಾಡಲಾಗಿದೆ.

RELATED ARTICLES

Related Articles

TRENDING ARTICLES