Sunday, January 19, 2025

ಶ್ರೀ ಕೃಷ್ಣಜನ್ಮಾಷ್ಟಮಿ : ಇಸ್ಕಾನ್​ ಟೆಂಪಲ್​ ಸಂಚಾರ ಮಾರ್ಗ ಬದಲಾವಣೆ!

ಬೆಂಗಳೂರು : ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಗರದ ಇಸ್ಕಾನ್​ ಟೆಂಪಲ್​ ಗೆ ಹೆಚ್ಚಿನ ಭಕ್ತರು ಬರುವ ನಿರೀಕ್ಷ ಇದ್ದು ದೇವಾಲಯಕ್ಕೆ ಸಾಗುವ ಸಂಚಾರ ನಿರ್ಬಂಧಿಸಲಾಗಿದೆ, ಈ ಹಿನ್ನೆಲೆ ಟ್ರಾಫಿಕ್​ ಸಮಸ್ಯೆ ಎದುರಾಗದಂತೆ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಸೂಚಿಸಲಾಗಿದೆ.

ಇದನ್ನೂ ಓದಿ: ಗೌರಿ ಲಂಕೇಶ್ ಸಂಸ್ಮರಣೆ ಕಾರ್ಯಕ್ರಮ!

ಇಂದು ಶ್ರೀ ಕೃಷ್ಣ ಜನ್ಮಾಷ್ಟಮಿ ಹಿನ್ನಲೆ ಬೆಂಗಳೂರು ನಗರದ ವೆಸ್ಟ್‌ ಆಫ್‌ ಕಾರ್ಡ್‌ ರಸ್ತೆಯ ಇಸ್ಕಾನ್‌ ದೇವಸ್ಥಾನಕ್ಕೆ ಇಂದು ಮತ್ತು ನಾಳೆ ಹೆಚ್ಚಿನ ಭಕ್ತರು ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ದೇವಸ್ಥಾನದ ಸುತ್ತಮುತ್ತಲ ರಸ್ತೆಗಳ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ.

ಡಾ.ರಾಜ್‌ಕುಮಾರ್‌ ರಸ್ತೆ ಮತ್ತು ವೆಸ್ಟ್‌ ಆಫ್‌ ಕಾರ್ಡ್‌ ರಸ್ತೆಯಲ್ಲಿ ಎರಡೂ ದಿನ KSRTC ಹಾಗೂ BMTC ಬಸ್‌ಗಳ ಸಂಚಾರ ನಿರ್ಬಂಧಿಸಲಾಗಿದೆ. ಬಸ್‌ಗಳು ಪರ್ಯಾಯ ರಸ್ತೆಗಳಲ್ಲಿ ಸಂಚರಿಸಬೇಕು ಎಂದು ಪೊಲೀಸರು ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES