ಬೆಂಗಳೂರು : ‘ನಾನು ನಿಮಗೆ ಇವತ್ತು ಒಂದು ಮಾತು ಹೇಳ್ತೀನಿ.. ಇವತ್ತಿಂದ ಯಡಿಯೂರಪ್ಪ ಮನೆಯಲ್ಲಿ ಕುಳಿತು ಕೊಳ್ಳುವುದಿಲ್ಲ’ ಎಂದು ಮಾಜಿ ಮುಖ್ಯಮಂತ್ರಿ ಡಾ.ಬಿ.ಎಸ್ ಯಡಿಯೂರಪ್ಪ ಹೇಳಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನನ್ನ ಪ್ರವಾಸ ಇನ್ನೂ ಮೂರು ಅಥವಾ ನಾಲ್ಕು ದಿನಗಳಲ್ಲಿ ಪ್ರಾರಂಭ ಆಗುತ್ತದೆ. ರಾಜ್ಯ ಪ್ರವಾಸ ಮಾಡಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ 25ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ’ ಎಂದು ಶಪಥ ಮಾಡಿದರು.
ನಾಳೆ ಬೆಂಗಳೂರಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಬರಗಾಲ ತಾಂಡವಾಡ್ತಿದೆ, ವಿದ್ಯುತ್ ಕಣ್ಣ ಮುಚ್ಚಾಲೆ, ಅಭಿವೃದ್ಧಿ ಕುಂಠಿತವಾಗ್ತಿದೆ. ಸಿಎಂ ಹಾಗೂ ಡಿಸಿಎಂ ಸರ್ಕಾರ ಸಂಪೂರ್ಣವಾಗಿ ಭ್ರಷ್ಟಾಚಾರದಲ್ಲಿ ತೊಡಗಿದೆ. ಅದಕ್ಮಾಗಿ ನಾಳೆ ರಾಜ್ಯಾದ್ಯಂತ ಹೋರಾಟ ಮಾಡುತ್ತಿದ್ದೇವೆ ಎಂದು ಗುಡುಗಿದರು.
ಇದನ್ನೂ ಓದಿ : ಪರಮೇಶ್ವರ್ ಹೇಳಿಕೆಗೆ ಯಡಿಯೂರಪ್ಪ ತಿರುಗೇಟು
BJP ಕಾರ್ಯಕರ್ತರ ಮೇಲೆ ಕೇಸ್
ಬರಗಾಲದಿಂದ ರಾಜ್ಯದ ಜನರು ಕಂಗಾಲಾಗಿದ್ದಾರೆ. ಕಾವೇರಿ ನೀರನ್ನು ತಮಿಳುನಾಡಿಗೆ ಬಿಡ್ತಿದ್ದಾರೆ. ಕೆಆರ್ಎಸ್ ಜಲಾಶಯ ಖಾಲಿ ಆಗುತ್ತಿದೆ. ನಮಗೆ ಕುಡಿಯೋಕೆ ನೀರು ಇಲ್ಲ, ವಿದ್ಯುತ್ ದರ ಜಾಸ್ತಿ ಆಗುತ್ತಿದೆ. ವರ್ಗಾವಣೆ ದಂಧೆಯಲ್ಲೇ ಸರ್ಕಾರ ನಿರತವಾಗಿದೆ. ಗುತ್ತಿಗೆದಾರರು ಕಮಿಷನ್ ಬಗ್ಗೆ ಮಾತಾಡಿದ್ದಾರೆ. ಶಾಸಕರಿಗೆ ಅನುದಾನ ಕೊಡುತ್ತಿಲ್ಲ. ಕಿಸಾನ್ ಸಮ್ಮಾನ್ ಯೋಜನೆ ನಿಲ್ಲಿಸಿದ್ದಾರೆ. ನಮ್ಮ ಕಾರ್ಯಕರ್ತರ ಮೇಲೆ ಕೇಸ್ ಹಾಕಿ ಅನಗತ್ಯ ವಾಗಿ ದ್ವೇಷ ಸಾರುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.