Wednesday, November 20, 2024

ಮೋದಿ ಇನ್ನೂ RSS ಪೂರ್ವಾಶ್ರಮದ ಗುಂಗಿನಲ್ಲಿದ್ದಾರೆ : ಸಿದ್ದರಾಮಯ್ಯ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಇನ್ನೂ ಆರ್.ಎಸ್.ಎಸ್​ನ ತನ್ನ ಪೂರ್ವಾಶ್ರಮದ ಗುಂಗಿನಲ್ಲಿದ್ದಂತೆ ಕಾಣುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಕಿದ್ದಾರೆ.

ಸನಾತನ ಧರ್ಮದ ಬಗ್ಗೆ ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆಗೆ ತಕ್ಕ ಪ್ರತ್ಯುತ್ತರ ನೀಡಿ ಎಂಬ ಪ್ರಧಾನಿ ಮೋದಿ ಕರೆ ಅವರು ತಿರುಗೇಟು ನೀಡಿದ್ದಾರೆ. ಮೋದಿ ಅವರ ಕರೆ ಅತ್ಯಂತ ಪ್ರಚೋದನಕಾರಿಯಾದುದು. ಅಲ್ಲದೇ, ಸಂವಿಧಾನ ವಿರೋಧಿಯಾದುದು. ಈ ಪ್ರಚೋದನಕಾರಿ ಹೇಳಿಕೆಯನ್ನು ಹಿಂದಕ್ಕೆ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.

ಮೋದಿ ಅವರು ಕೇವಲ ಬಿಜೆಪಿಯ ನಾಯಕರಲ್ಲ, ಸಾಂವಿಧಾನಿಕ ಹುದ್ದೆಯಾದ ಪ್ರಧಾನಮಂತ್ರ ಕುರ್ಚಿಯಲ್ಲಿ ಕುಳಿತಿದ್ದಾರೆ. ಅವರ ನಡೆ-ನುಡಿ ಮತ್ತು ಕ್ರಿಯೆ-ಪ್ರತಿಕ್ರಿಯೆ ಆ ಸ್ಥಾನದ ಘನತೆ-ಗೌರವ ಮತ್ತು ಜವಾಬ್ದಾರಿಗಳಿಗೆ ತಕ್ಕಂತೆ ಇರಬೇಕಾಗಿರುವುದು ರಾಜಧರ್ಮ ಎಂದು ಚಾಟಿ ಬೀಸಿದ್ದಾರೆ.

ಪ್ರಧಾನಿ ಅನ್ನೋದನ್ನು ಮರೆತಿದ್ದಾರೆ

ಮೋದಿ ತಾನು ಈ ದೇಶದ 140 ಕೋಟಿ ಜನರಿಗೂ ಪ್ರಧಾನಿ ಅನ್ನೋದನ್ನು ಮರೆತಿದ್ದಾರೆ. ಪ್ರಧಾನಿ ಅವರ ಇಂತಹ ಹೇಳಿಕೆಗಳಿಂದ ಪ್ರಚೋದಿತರಾಗಿ ಅವರದ್ದೇ ಪಕ್ಷ ಮತ್ತು ಸಂಘಟನೆಯ ಅನೇಕ ನಾಯಕರು ಹಿಂಸಾಚಾರಕ್ಕೆ ಕರೆನೀಡುತ್ತಿರುವುದು ಕಳವಳಕಾರಿ ಬೆಳವಣಿಗೆಯಾಗಿದೆ ಎಂದು ವಿಷಾಧ ವ್ಯಕ್ತಪಡಿಸಿದ್ದಾರೆ.

ಮೋದಿ ಮಾಡಿದರೂ ಅಪರಾಧವೇ

ಯಾರಾದರೂ ತಪ್ಪು ಮಾಡಿದ್ದರೆ ಕಾನೂನು ಪ್ರಕಾರ ಅಂತಹವರ ವಿರುದ್ಧ ಕ್ರಮಕೈಗೊಳ್ಳಬೇಕು. ಇದರ ಬದಲಿಗೆ ತಕ್ಕ ಪ್ರತ್ಯುತ್ತರ ನೀಡಿ ಅಂತ ಪ್ರಚೋದಿಸುವುದು, ಕಾನೂನನ್ನು ಕೈಗೆತ್ತಿಕೊಳ್ಳಲು ನೀಡುವ ಕರೆಯಾಗುತ್ತದೆ. ಇದನ್ನು ಪ್ರಧಾನಿ ಮೋದಿ ಮಾಡಿದರೂ ಅಪರಾಧವೇ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

RELATED ARTICLES

Related Articles

TRENDING ARTICLES