Wednesday, January 22, 2025

ಉದಯನಿಧಿಗೆ ಕಪಾಳಮೋಕ್ಷ ಮಾಡಿದವರಿಗೆ 10 ಲಕ್ಷ ಬಹುಮಾನ!

ಬೆಂಗಳೂರು : ಸನಾತನ ಧರ್ಮದ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರಿಗೆ ಕಪಾಳಮೋಕ್ಷ ಮಾಡಿದವರಿಗೆ 10 ಲಕ್ಷ ರೂಪಾಯಿ ನಗದು ಬಹುಮಾನ ಘೋಷಿಸಲಾಗಿದೆ.

ಆಂಧ್ರಪ್ರದೇಶದ ವಿಜಯವಾಡದಲ್ಲಿ ಜನ ಜಾಗರಣ ಸಮಿತಿ ಎಂಬ ಸಂಸ್ಥೆ, ಸ್ಟಾಲಿನ್ ಮಗನಿಗೆ ಕಪಾಳಮೋಕ್ಷ ಮಾಡಿದವರಿಗೆ 10 ಲಕ್ಷ ಬಹುಮಾನ ನೀಡುವುದಾಗಿ ಪೋಸ್ಟರ್‌ಗಳನ್ನು ಹಾಕಿದೆ. ಸದ್ಯ ಈ ಪೋಸ್ಟರ್​ ಎಲ್ಲೆಡೆ ವೈರಲ್​​ ಆಗಿದೆ.

ಉದಯನಿಧಿ ಹೇಳಿದ್ದೇನು?

ಸನಾತನ ಧರ್ಮ ಡೆಂಗ್ಯೂ, ಮಲೇರಿಯಾ ಇದ್ದಂತೆ. ಇಂತಹ ವಿಶೇಷ ಕಾರ್ಯಕ್ರಮದಲ್ಲಿ ಮಾತನಾಡಲು ನನಗೆ ಅವಕಾಶ ನೀಡಿದ್ದಕ್ಕಾಗಿ ಧನ್ಯವಾದಗಳು. ನೀವು ಸನಾತನ ವಿರೋಧಿ ಸಮ್ಮೇಳನ ಎಂಬುದಾಗಿ ಆಯೋಜಿಸುವ ಬದಲು ಸನಾತನ ನಿರ್ಮೂಲನಾ ಸಮ್ಮೇಳನ ಎಂಬುದಾಗಿ ಕಾರ್ಯಕ್ರಮ ಆಯೋಜಿಸಿದ್ದು ನನಗೆ ಇಷ್ಟವಾಯಿತು ಎಂದು ಉದಯನಿಧಿ ಸ್ಟಾಲಿನ್‌ ಹೇಳಿದ್ದರು.

RELATED ARTICLES

Related Articles

TRENDING ARTICLES