Saturday, January 18, 2025

ಜಾಲಿ ರೈಡ್​ಗೆ ಬಂದ ಇಬ್ಬರು ಯುವಕರು ಅಪಘಾತದಲ್ಲಿ ಸಾವು

ದಾವಣಗೆರೆ : ದ್ವಿಚಕ್ರ ವಾಹನ ಚಾಲಕನ ನಿಯಂತ್ರಣ ತಪ್ಪಿ ಜಾಲಿ ರೈಡ್​ಗೆ ಬಂದಿದ್ದ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಎಸ್ ಎಸ್ ಆಸ್ಪತ್ರೆ ಪಕ್ಕದಲ್ಲಿರುವ ರೈಲ್ವೆ ಬ್ರಿಡ್ಜ್ ಬಳಿ ನಡೆದಿದೆ.

ಕೇರಳ ಮೂಲದ ಅತುಲ್ (25) ಮತ್ತು ಋಷಿಕೇಶ್ (24) ಮೃತ ದುರ್ದೈವಿಗಳು. ಎಂಬ ಇಬ್ಬರು ಯುವಕರು ಎನ್ ಫಿಲ್ಡ್ ಇಮಾಲಯನ್ ಬೈಕವೊಂದರಲ್ಲಿ ಜಾಲಿ ರೈಡ್​ಗೆ ಬಂದಿದ್ದರು. ಈ ವೇಳೆ ಬೈಕ್ ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಬ್ರಿಡ್ಜ್ ಮೇಲಿಂದ ರೈಲ್ವೆ ಹಳಿ ಪಕ್ಕದಲ್ಲಿ ಬಿದ್ದು, ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಇದನ್ನು ಓದಿ : ಮುದ್ದು ಕೃಷ್ಣನಾಗಿ ಮಿಂಚಿದ ನಟ ನಿಖಿಲ್ ಕುಮಾರ್ ಪುತ್ರ

ಈ ವೇಳೆ ರಸ್ತೆಯ ಮಧ್ಯೆ ಬಿದ್ದಿದ್ದ ಬೈಕ್​ಗೆ ಕಾರುವೊಂದು ಬಂದು ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಾಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಘಟನಾ ಸ್ಥಳಕ್ಕೆ ಎಸ್.ಪಿ ಉಮಾ ಪ್ರಶಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ದಾವಣಗೆರೆ ದಕ್ಷಿಣ ಸಂಚಾರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

Related Articles

TRENDING ARTICLES