ಹಾವೇರಿ : ಆಪರೇಷನ್ ಹಸ್ತಕ್ಕೆ ಒಳಗಾಗಿ ಕಾಂಗ್ರೆಸ್ಗೆ ಹೋದವರ ಪರಿಸ್ಥಿತಿ ನಾಯಿಪಾಡಾಗಿ ಹೋಗುತ್ತದೆ ಎಂದು ಮಾಜಿ ಕೃಷಿ ಸಚಿವ ಬಿ.ಸಿ ಪಾಟೀಲ್ ಕುಟುಕಿದರು.
ಹಾವೇರಿ ಜಿಲ್ಲೆಯ ಹಿರೇಕೆರೂರಿನಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆ ದೃಷ್ಟಿಯಲ್ಲಿ ಕಾಂಗ್ರೆಸ್ನವರು ಆಪರೇಷನ್ ಮಾಡುತ್ತಿದ್ದಾರೆ. ಕಾಂಗ್ರೆಸ್ಗೆ ಬಂದವರು ಲಾಸ್ಟ್ ಬೆಂಚ್ನಲ್ಲಿ ಕುಳಿತುಕೊಳ್ಳಬೇಕಾಗುತ್ತದೆ ಎಂದಿದ್ದಾರೆ. ಲೋಕಸಭಾ ಚುನಾವಣೆ ಬಳಿಕ ಆಪರೇಷನ್ ಹಸ್ತ ಕಾಂಗ್ರೆಸ್ ಪಕ್ಷಕ್ಕೆ ಮುಳುವಾಗುತ್ತದೆ ಎಂದರು.
ಹಾವೇರಿ ಲೋಕಸಭಾ ಕ್ಷೇತ್ರದ ಎಂಪಿ ಟಿಕೆಟ್ ವಿಚಾರವಾಗಿ ಮಾತನಾಡಿದ ಅವರು, ಮಾಜಿ ಸಚಿವ ಈಶ್ವರಪ್ಪ ವಿರುದ್ದ ಮತ್ತೆ ವಾಗ್ದಾಳಿ ನಡೆಸಿದರು. ಟಿಕೆಟ್ ವಿಚಾರ ಹೇಳಬೇಕಾದವರು ಹೇಳಬೇಕಲ್ಲ. ಈಶ್ವರಪ್ಪ ಮಗನನ್ನು ಹಾವೇರಿ ಕ್ಷೇತ್ರದ ಅಭ್ಯರ್ಥಿ ಮಾಡ್ತಿವಿ ಅಂತ ಹೇಳಬೇಕಾದವರು ಹೇಳಬೇಕು. ನಾಳೆ ಕಾರ್ಯಕಾರಿಣಿ ಸಬೆ ಕರೆದಿದ್ದೇವೆ, ಬಸವರಾಜ ಬೊಮ್ಮಾಯಿಯವರು ಬರುತ್ತಿದ್ದಾರೆ. ಹಾವೇರಿ, ಗದಗ ಜಿಲ್ಲೆಯವರಿಗೆ ಟಿಕೆಟ್ ಕೊಡಿ ಎಂದು ಹೇಳಿದರು.
ಜೆಡಿಎಸ್ ಬಿಜೆಪಿ ಮೈತ್ರಿ ವಿಚಾರವಾಗಿ ಮಾತನಾಡಿದ ಅವರು, ರಾಜಕೀಯವಾಗಿ ಹೊಂದಾಣಿಕೆ ಮಾಡಿಕೊಳ್ಳಬೇಕು. ದೇವೆಗೌಡರು ಹಸ್ತ ಚಾಚಿದ್ದಾರೆ ಅದನ್ನು ಸ್ವಾಗತ ಮಾಡುತ್ತೇನೆ ಎಂದು ತಿಳಿಸಿದರು.