Monday, December 23, 2024

ಸಿಎಂ ಸರ್.. ‘ಆರೋಗ್ಯ ಚೆನ್ನಾಗಿ ನೋಡಿಕೊಳ್ಳಿ’ : ಸಿದ್ದರಾಮಯ್ಯಗೆ ಬಾಲಕಿ ಪತ್ರ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್.. ನೀವು ನಿಮ್ಮ ಆರೋಗ್ಯವನ್ನು ಚೆನ್ನಾಗಿ ನೋಡಿಕೊಳ್ಳಿ ಎಂದು ಧಾರವಾಡ ಜಿಲ್ಲೆಯ ಬಾಲಕಿಯೊಬ್ಬಳು ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾಳೆ.

9 ಮತ್ತು 10ನೇ ತರಗತಿಗೂ ರಾಜ್ಯ ಸರ್ಕಾರ ಮೊಟ್ಟೆಯನ್ನು ವಿಸ್ತರಿಸಿರುವ ಬಗ್ಗೆ ಆಶಾ ನೆಹರು ಪಾಟೀಲ್ ಎಂಬ ಬಾಲಕಿ ಸಿಎಂಗೆ ಪತ್ರ ಬರೆದು ತನ್ನ ಸಂತಸ ಹಂಚಿಕೊಂಡಿದ್ದಾಳೆ.

ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ನಾಡಿನ ಪ್ರತಿ ವಿದ್ಯಾರ್ಥಿಗೂ ಪೌಷ್ಟಿಕ ಆಹಾರ ದೊರಕಬೇಕು, ಯಾರೊಬ್ಬರೂ ಈ ಅವಕಾಶದಿಂದ ವಂಚಿತರಾಗಬಾರದು ಎಂಬ ಸದಾಶಯದೊಂದಿಗೆ ಈ ಮೊದಲು 1 ರಿಂದ 8ನೇ ತರಗತಿಯ ವರೆಗಿನ ಮಕ್ಕಳಿಗೆ ವಿತರಿಸಲಾಗುತ್ತಿದ್ದ ಮೊಟ್ಟೆಯನ್ನು ನಮ್ಮ ಸರ್ಕಾರವು 9 ಮತ್ತು 10ನೇ ತರಗತಿಗೂ ವಿಸ್ತರಿಸಿದೆ.

ನಮ್ಮ ಈ ವಿದ್ಯಾರ್ಥಿ ಸ್ನೇಹಿ ನಿರ್ಧಾರದ ಬಗ್ಗೆ ಆಶಾ ನೆಹರು ಪಾಟೀಲ್ ಎಂಬ ಪುಟ್ಟ ಬಾಲಕಿಯೊಬ್ಬಳು ನನಗೆ ಪತ್ರ ಬರೆದು ತನ್ನ ಸಂತಸ ಹಂಚಿಕೊಂಡಿದ್ದಾಳೆ ಮಾತ್ರವಲ್ಲ, ಇಂತಹ ಕಾರ್ಯಕ್ರಮಗಳನ್ನು ನೀಡುತ್ತಿರುವ ತಾವು ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಅಕ್ಕರೆಯಿಂದ ಸಲಹೆ ನೀಡಿದ್ದಾಳೆ ಎಂದು ಹೇಳಿದ್ದಾರೆ.

ಸುದ್ದಿ ಓದಿದ್ದೀರಾ? : JDS-BJP ಮೈತ್ರಿಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ: ಸಿದ್ದರಾಮಯ್ಯ

ನನ್ನ ಉದ್ದೇಶ ಸಾರ್ಥಕವಾಗಿಸಿತು

ಪುಟ್ಟ ಬಾಲಕಿಯ ಪತ್ರವು ಈ ಯೋಜನೆಯನ್ನು ರೂಪಿಸಿ ಜಾರಿಗೊಳಿಸಿದ ನನ್ನ ಉದ್ದೇಶವನ್ನು ಸಾರ್ಥಕವಾಗಿಸಿತು. ಇಂಥ ಮುಗ್ಧ ಮಕ್ಕಳ ಭವಿಷ್ಯವನ್ನು ಉಜ್ವಲವಾಗಿಸುವುದು ನಮ್ಮ‌ ಸರ್ಕಾರದ ಪ್ರಮುಖ ಉದ್ದೇಶವಾಗಿದೆ. ಶಾಂತಿ, ಸೌಹಾರ್ದತೆಯ ಸಮೃದ್ಧ ಕರ್ನಾಟಕ ನಿರ್ಮಾಣದ ನನ್ನ ಸಂಕಲ್ಪಕ್ಕೆ ಈ ದಿನ ಇನ್ನಷ್ಟು ಬಲ ಬಂದಿದೆ ಎಂದು ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES