ರಾಮನಗರ : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ವಿಚಾರವಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಪ್ರತಿಕ್ರಿಯೆ ನೀಡಿದ್ದಾರೆ.
ಚನ್ನಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಜೆಡಿಎಸ್-ಬಿಜೆಪಿ ಮೈತ್ರಿ ಬಗ್ಗೆ ನಮ್ಮ ರಾಷ್ಟ್ರೀಯ ನಾಯಕರಾದ ಹೆಚ್.ಡಿ ದೇವೇಗೌಡ ಸಾಹೇಬ್ರು ತೀರ್ಮಾನ ಮಾಡ್ತಾರೆ ಎಂದು ಹೇಳಿದ್ದಾರೆ.
ಸದ್ಯ ಬಿಜೆಪಿ ನಾಯಕರು ತಮ್ಮ ಅಭಿಪ್ರಾಯ ಹೇಳಿದ್ದಾರೆ. ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡಿ ಈ ಬಗ್ಗೆ ತೀರ್ಮಾನ ಮಾಡುತ್ತೇವೆ. ಈಗ ಬಿಜೆಪಿಯವ್ರಿಗೆ ಜೆಡಿಎಸ್ನ ಹೆಣ್ಣು ಚೆನ್ನಾಗಿದೆ ಅಂತ ಗೊತ್ತಾಗಿದೆ. ನಮ್ಮ ಮೇಲಿಟ್ಟಿರುವ ಅಭಿಮಾನಕ್ಕೆ ಧನ್ಯವಾದ. ಅವರಿಗಾದರೂ ಜನತಾದಳದ ಹುಡುಗಿ ಇಷ್ಟ ಆಗಿದ್ದಾಳೆ ಅಲ್ವಾ ಎಂದು ನಗೆ ಚಟಾಕಿ ಹಾರಿಸಿದ್ದಾರೆ.
ಮೈತ್ರಿ ಕುರಿತು ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡುತ್ತೇವೆ, ಬಜಾರ್ನಲ್ಲಿ ಅಲ್ಲ. ಸೆಪ್ಟಂಬರ್ 10ರಂದು ಪಕ್ಷದ ಕಾರ್ಯಕರ್ತರ ಸಭೆ ಇದೆ. ಈ ಬಗ್ಗೆ ಚರ್ಚೆ ಮಾಡಿ ತೀರ್ಮಾನ ಮಾಡ್ತೀವಿ ಎಂದು ಸಿ.ಎಂ ಇಬ್ರಾಹಿಂ ತಿಳಿಸಿದ್ದಾರೆ.