Sunday, December 22, 2024

ಗೃಹಲಕ್ಷ್ಮಿ ನೋಂದಣಿ ಪ್ರಕ್ರಿಯೆ ಸ್ಥಗಿತ ಇಲ್ಲ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​

ಬೆಂಗಳೂರು : ಯಾವುದೇ ಕಾರಣಕ್ಕೂ ಗೃಹಲಕ್ಷ್ಮಿ ಯೋಜನೆಯ ನೋಂದಣಿ ಪ್ರಕ್ರಿಯೆ ಸ್ಥಗಿತಗೊಳ್ಳುವುದಿಲ್ಲ. ನೋಂದಣಿ ಪ್ರಕ್ರಿಯೆ ನಿರಂತರವಾಗಿರಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಸ್ಪಷ್ಟಪಡಿಸಿದ್ದಾರೆ.

ಕೆಲವೊಂದು ತಾಂತ್ರಿಕ ಕಾರಣಗಳಿಂದಾಗಿ ಬ್ಯಾಂಕ್‌ಗಳಲ್ಲಿ ಹಣ ಸಂದಾಯವಾಗುವುದು ತಡವಾಗಿದೆ. ಇನ್ನೂ ನಾಲ್ಕೈದು ದಿನಗಳಲ್ಲಿ ಎಲ್ಲರಿಗೂ ಹಣ ವರ್ಗಾವಣೆ ಆಗಲಿದೆ ಎಂದು ಸಚಿವೆ ತಿಳಿಸಿದರು.

ಇದನ್ನೂ ಓದಿ: ನನ್ನ ಪುತ್ರ ನರಮೇಧದ ಹೇಳಿಕೆಯನ್ನೇನೂ ಕೊಟ್ಟಿಲ್ಲ: ಎಂ. ಕೆ. ಸ್ಟಾಲಿನ್!

ಸಾಮಾಜಿಕ ಜಾಲತಾಣದಲ್ಲಿ ಗೃಹಲಕ್ಷ್ಮಿ ಯೋಜನೆ ಸ್ಥಗಿತ ಎಂಬ ಮಾಹಿತಿ ಪ್ರಕಟವಾದ ಕುರಿತಂತೆ ಪ್ರತಿಕ್ರಿಯಿಸಿದ ಸಚಿವೆ, ಕೆಲವರ ಅಚಾತುರ್ಯದಿಂದ ಈ ರೀತಿ ಆಗಿದ್ದು, ಇದು ನಿರಂತರವಾಗಿ ನಡೆಯುವ ಯೋಜನೆ. ಸಾಮಾಜಿಕ ಜಾಲತಾಣದಲ್ಲಿ ತಪ್ಪು ಮಾಹಿತಿ ಹರಡಿಸಿದವರಿಗೆ ನೋಟೀಸ್ ಜಾರಿ ಮಾಡುತ್ತೇವೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದರು.

RELATED ARTICLES

Related Articles

TRENDING ARTICLES