Monday, May 20, 2024

ಬಿಜೆಪಿ ಭಾರತದ ಬಡತನವನ್ನ ಮರೆಮಾಚುತ್ತಿದೆ : ರಾಹುಲ್ ಗಾಂಧಿ

ನವದೆಹಲಿ : ಕೇಂದ್ರ ಸರ್ಕಾರ ಭಾರತದ ಬಡತನವನ್ನು ಮರೆಮಾಚಲು ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಕುಟುಕಿದ್ದಾರೆ.

ಜಿ-20 ಶೃಂಗಸಭೆ ಕುರಿತು ಟ್ವೀಟ್ ಮಾಡಿರುವ ಅವರು, ಜಿ-20 ಅತಿಥಿಗಳಿಗೆ ಭಾರತದ ವಾಸ್ತವತೆಯನ್ನು ಮರೆಮಾಡುವ ಅಗತ್ಯವಿಲ್ಲ. ನಮ್ಮ ದೇಶದ ಬಡ ಜನರನ್ನು ಮರೆಮಾಚುವ ಅಗತ್ಯ ಇಲ್ಲ ಎಂದು ಹೇಳಿದ್ದಾರೆ.

ಅಲ್ಲದೇ ಜಿ-20 ಸಭೆಗೂ ಮುನ್ನ ದೆಹಲಿಯ ಬೀದಿಗಳಲ್ಲಿ ನಾಯಿಗಳನ್ನು ಸೆರೆ ಹಿಡಿಯಲಾಗಿತ್ತು. ಅಲ್ಲದೇ, ಸ್ಲಂಗಳಿಗೆ ಪರದೆಯ ಮೂಲಕ ಮರೆ ಮಾಡಲಾಗಿತ್ತು. ಈ ಬಗ್ಗೆ ಕಾಂಗ್ರೆಸ್ ವಿಡಿಯೋ ಒಂದನ್ನು ಹಂಚಿಕೊಂಡಿತ್ತು. ಈ ವಿಚಾರವಾಗಿ ನಮ್ಮ ನೆಲದ ಜನರು ಹಾಗೂ ಪ್ರಾಣಿಗಳನ್ನು ಮುಚ್ಚಿಡುವ ಅಗತ್ಯವಿಲ್ಲ ಎಂದು ಬರೆದುಕೊಂಡಿದ್ದಾರೆ.

ಯೂರೋಪ್ ಪ್ರವಾಸದಲ್ಲಿ ರಾಗಾ

ರಾಹುಲ್ ಗಾಂಧಿ ಅವರು ಭಾರತೀಯ ಸಾಗರೋತ್ತರ ಕಾಂಗ್ರೆಸ್ ಆಯೋಜಿಸಿರುವ ಯೂರೋಪ್ ಪ್ರವಾಸದಲ್ಲಿದ್ದಾರೆ. ಅಲ್ಲಿಂದಲೇ ಭಾರತದಲ್ಲಿ ನಡೆಯುತ್ತಿರುವ ಜಿ-20 ಶೃಂಗ ಸಭೆಯನ್ನು ಗಮನಿಸುತ್ತಿದ್ದಾರೆ. ಪ್ರಧಾನಿ  ರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷರನ್ನು ಪತ್ರಕರ್ತರು ಪ್ರಶ್ನಿಸಲು ಅವಕಾಶ ನೀಡದ ವಿಚಾರವಾಗಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.

RELATED ARTICLES

Related Articles

TRENDING ARTICLES