Monday, May 13, 2024

ಕೇಂದ್ರ ಸರ್ಕಾರದಿಂದಲೂ ನೆರವು ಬರಬೇಕಿದೆ : ಮೋದಿಯತ್ತ ಸಿಎಂ ಬೊಟ್ಟು

ಹುಬ್ಬಳ್ಳಿ : ಬರ ಪ್ರದೇಶಗಳಲ್ಲಿ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರದಿಂದಲೂ ಸಕಾಲದಲ್ಲಿ ನೆರವು ಬರಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರೋಕ್ಷ ವಾಗಿ ಕೇಂದ್ರದತ್ತ ಬೊಟ್ಟು ಮಾಡಿದರು.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರಗಾಲ ಘೋಷಿತ ಪ್ರದೇಶಗಳಿಗೆ ಪರಿಹಾರ ಒದಗಿಸಲು ಇರುವ ಮಾರ್ಗಸೂಚಿಗಳನ್ನು ಪರಿಷ್ಕರಿಸಲು ಕೋರಿ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದೆ. ಅದಕ್ಕೂ ಯಾವುದೇ ಉತ್ತರ ಬಂದಿಲ್ಲ ಎಂದು ಬೇಸರಿಸಿದರು.

ಬರಗಾಲ ಘೋಷಿತ ಪ್ರದೇಶಗಳಲ್ಲಿ ರಾಜ್ಯ ಸರ್ಕಾರದ ವತಿಯಿಂದ ಕುಡಿಯುವ ನೀರು, ಬಿತ್ತನೆಗೆ ನೆರವು ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಆದರೆ, ಕೇಂದ್ರ ಸರ್ಕಾರದಿಂದಲೂ ಸಕಾಲದಲ್ಲಿ ನೆರವು ಬರಬೇಕಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಪ್ರಧಾನಿಯಿಂದ ಉತ್ತರ ಬಂದಿಲ್ಲ

ಮಹದಾಯಿ, ಕೃಷ್ಣಾ ಮೇಲ್ದಂಡೆ, ಕಾವೇರಿ ವಿವಾದ ಸೇರಿದಂತೆ ಎಲ್ಲ ನೀರಾವರಿ ಯೋಜನೆಗಳ ಬಗ್ಗೆ ಕೇಂದ್ರಕ್ಕೆ ಒತ್ತಾಯಿಸಲು ಸರ್ವಪಕ್ಷದ ನಿಯೋಗದೊಂದಿಗೆ ತೆರಳಲು ಪ್ರಧಾನಿ ನರೇಂದ್ರ ಮೋದಿಯವರ ಸಮಯ ಕೋರಿ ಪತ್ರ ಬರೆಯಲಾಗಿತ್ತು. ಆದರೆ, ಈವರೆಗೆ ಕೇಂದ್ರದಿಂದ ಯಾವುದೇ ಉತ್ತರ ಬಂದಿಲ್ಲ ಎಂದರು.

ಮಹದಾಯಿ ಚಾಲನೆ ರಾಜ್ಯ ಸಿದ್ಧ

ಮಹದಾಯಿ ಯೋಜನೆಗೆ ಚಾಲನೆ ನೀಡಲು ರಾಜ್ಯ ಸರ್ಕಾರ ತಯಾರಿದೆ. ಆದರೂ, ಕೇಂದ್ರ ಸರ್ಕಾರದಿಂದ ಅರಣ್ಯ ಮತ್ತು ಪರಿಸರ ಅನುಮತಿ ದೊರೆತಿಲ್ಲ. ಇದಕ್ಕೆ ಸಂಬಂಧಿಸಿದ ಎಲ್ಲ ವರದಿಗಳನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗಿದೆ ಎಂದು ಸಿದ್ದರಾಮಯ್ಯ ಮಾಹಿತಿ ನೀಡಿದರು.

RELATED ARTICLES

Related Articles

TRENDING ARTICLES