Wednesday, January 22, 2025

ನನ್ನನ್ನ ಅರೆಸ್ಟ್ ಮಾಡಿದ್ರೆ ತುಂಬಾ ಹ್ಯಾಪಿ, ಅರೆಸ್ಟ್ ಆಗದೇ ತುಂಬಾ ಟೈಮ್ ಆಯ್ತು : ಕಲ್ಲಡ್ಕ ಪ್ರಭಾಕರ್

ಮಂಗಳೂರು : ‘ನಾವೆಲ್ಲರೂ ಮಂಗಳೂರು ವಿವಿ ಗಣೇಶೋತ್ಸವಕ್ಕೆ ಬಂದೇ ಬರ್ತೇವೆ, ಅಲ್ಲಿ ಇರ್ತೇವೆ, ಅದರಲ್ಲಿ ಎರಡು ಪ್ರಶ್ನೆ ಇಲ್ಲ. ಬಂದರೆ ಏನು ಮಾಡ್ತಾರೆ? ಅರೆಸ್ಟ್ ಮಾಡ್ತಾರಾ? ನಾನು ಬಂದೇ ಬರ್ತೇನೆ. ನನ್ನನ್ನ ಅರೆಸ್ಟ್ ಮಾಡಿದ್ರೆ ತುಂಬಾ ಸಂತೋಷ. ಅರೆಸ್ಟ್ ಆಗದೇ ತುಂಬಾ ಸಮಯ ಆಯ್ತು. ಅರೆಸ್ಟ್ ಮಾಡಿದರೆ ಮಾಡಲಿ, ಅದರಲ್ಲಿ ನನಗೆ ಗಡಿಬಿಡಿ ಇಲ್ಲ’ ಎಂದು ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಗುಡುಗಿದರು.

ಮಂಗಳೂರಿನ ಅಸೈಗೋಳಿಯಲ್ಲಿ ಮಾತನಾಡಿದ ಅವರು, ಹೊರಗಿನವರು ಅಂದರೆ ಯಾರು? ನಾವೆಲ್ಲರೂ ಈ ದೇಶದಲ್ಲಿ ಇರುವವರೇ, ನಾವೆಲ್ಲರೂ ಗಣೇಶನ ಭಕ್ತರೇ ಅಲ್ವಾ? ಹೊರಗಿನವರು ಅಂದ್ರೆ ಯಾರು? ಒಳಗಿರೋರು ಅಂದ್ರೆ ವಿದ್ಯಾರ್ಥಿಗಳು, ಅವರು ಬೇರೆ ಬೇರೆ ಜಾಗದಿಂದ ಬಂದವರು. ಇಡೀ ರಾಜ್ಯದಿಂದ ಅಲ್ಲಿಗೆ ಜನ ಬಂದಿರ್ತಾರೆ, ಇದರಲ್ಲಿ ಹೊರಗಿನವರು ಅಂತ ಇಲ್ಲ ಎಂದು ತಿರುಗೇಟು ನೀಡಿದರು.

ವಿವಿ ಹಿಂದೂ ಮೆಜಾರಿಟಿ ಸಂಸ್ಥೆ

ಗಣೇಶೋತ್ಸವಕ್ಕೆ ಯಾರೂ ಬರಬಾರದು ಅನ್ನೋದು ಒಳ್ಳೆಯ ಮಾತಲ್ಲ. ಸ್ಪೀಕರ್ ಯು.ಟಿ ಖಾದರ್ ಹಾಗೆಲ್ಲ ಮಾತನಾಡಲ್ವಂತ, ಅವರು ಎಲ್ಲರನ್ನು ಒಂದೇ ಕಲ್ಪನೆಯಲ್ಲಿ ಕೊಂಡು ಹೋಗಬೇಕು. ನಮ್ಮದು ಧರ್ಮಾಧರಿತ ದೇಶ, ಜಗತ್ತಿನ ಮೋಸ್ಟ್ ಸೆಕ್ಯುಲರ್ ಹಿಂದು. ನಿಮ್ಮ ದೇವರನ್ನ ನೀವು ಪೂಜೆ ಮಾಡಿ, ನಮ್ಮದಕ್ಕೆ ವಿರೋಧ ಬೇಡ. ವಿವಿ ಅನ್ನೋದು ಹಿಂದೂ ಮೆಜಾರಿಟಿ ಇರೋ ಒಂದು ಸಂಸ್ಥೆ. ಅಲ್ಲಿ ದೇವರನ್ನು ಪೂಜೆ ಮಾಡಬಾರದು ಅಂದ್ರೆ ಏನರ್ಥ? ಎಂದು ಪ್ರಶ್ನಿಸಿದರು.

ವಿವಿಯಲ್ಲಿ ಅಲ್ಲಾನನ್ನ ಪೂಜೆ ಮಾಡಲಿ

ಸೆಕ್ಯುಲರ್ ಹೆಸರಿನಿಂದ ಹಿಂದೂಗಳ ಜೀವನಕ್ಕೆ ತೊಂದರೆ ಆಗಿದೆ. ಅವರ ಮಸೀದಿ, ಮನೆಯಲ್ಲಿ ಅಲ್ಲಾನನ್ನೇ ಪೂಜೆ ಮಾಡಲಿ. ಇದು ರಾಷ್ಟ್ರಧರ್ಮ, ಹಾಗಾಗಿ ಮುಸಲ್ಮಾನರು ಗೌರವ ಕೊಡಲಿ. ಎಲ್ಲರೂ ಒಟ್ಟಿಗೆ ಬದುಕಲು ನಾವು ಪರಸ್ಪರ ಗೌರವಿಸಬೇಕು. ವಿವಿಯಲ್ಲಿ ಅಲ್ಲಾನನ್ನ ಪೂಜೆ ಮಾಡೋದಾದ್ರೆ ಮಾಡಲಿ. ಇವರು ನಿನ್ನೆ ಕಮ್ಯುನಿಸ್ಟರಿಗೆ ಕಾರ್ಯಕ್ರಮ ಮಾಡಲು ವಿವಿಯಲ್ಲಿ ಅವಕಾಶ ಕೊಡ್ತಾರೆ. ಹಿಂದೂ ವಿರೋಧಿ ಮಾತನಾಡುವ ಶಂಸುಲ್ ಇಸ್ಲಾಂಗೆ ಅವಕಾಶ ಕೊಡಲಿಲ್ವಾ? ಎಂದು ವಾಗ್ದಾಳಿ ನಡೆಸಿದರು.

RELATED ARTICLES

Related Articles

TRENDING ARTICLES