ಬೆಂಗಳೂರು : ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಜೆಡಿಎಸ್ ಪಕ್ಷದ ಸಮಾವೇಶ ಆಯೋಜಿಸಲಾಗಿದ್ದು ಸಮಾವೇಶದಲ್ಲಿ ಮುಖಂಡರು ಮತ್ತು ಕಾರ್ಯಕರ್ತರು ಭಾಗಿಯಾಗಲಿದ್ದಾರೆ.
ಇನ್ನು ಕೆಲವೇ ತಿಂಗಳುಗಳಲ್ಲಿ ಬರಲಿರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಳ್ಳುವ ಸಲುವಾಗಿ ಇಂದಿನ ಸಭೆಯೂ ಮಹತ್ವ ಪಡೆದುಕೊಂಡಿದೆ.
ಇದನ್ನೂ ಓದಿ: ನಟ ಪವನ್ ಕಲ್ಯಾಣ್ ಅರೆಸ್ಟ್!
ಅರಮನೆ ಮೈದಾನದಲ್ಲಿ ಬೆಳಗ್ಗೆ 10.30ಕ್ಕೆ ಸಮಾವೇಶ ಆರಂಭವಾಗಲಿದ್ದು ಜೆಡಿಎಸ್ ವರಿಷ್ಠರು, ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ, ಸಿ.ಎಂ ಇಬ್ರಾಹಿಂ ಮತ್ತು ಜಿಟಿಡಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ.
JDS ಹಾಲಿ ಶಾಸಕರು, ಸಂಸದ, ಮಾಜಿ ಸಚಿವರು, ಮಾಜಿ ಸಂಸದರು, ಮಾಜಿ ಶಾಸಕರು ಮತ್ತು ಪರಾಜಿತ ಅಭ್ಯರ್ಥಿಗಳು ಭಾಗಿಯಾಗಲಿದ್ದಾರೆ ಜೊತೆಗೆ ಘಟಕಗಳ ಪದಾಧಿಕಾರಿ, ಕಾರ್ಯಕರ್ತರಿಗೆ ಆಹ್ವಾನ ನೀಡಲಾಗಿದೆ. ಹೀಗಾಗಿ ಜೆಡಿಎಎಸ್ ಸಮಾವೇಶದಲ್ಲಿ 10 ಸಾವಿರಕ್ಕೂ ಹೆಚ್ಚು ಜನ ಭಾಗವಹಿಸುವ ನಿರೀಕ್ಷೆ ಇದೆ.
ಈ ಸಭೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಪ್ರಮುಖವಾಗಿ ಚರ್ಚಿಸಲಾಗುತ್ತದೆ. ಹಾಗೆಯೇ ಬಿಜೆಪಿ ಜೊತೆ ಸಖ್ಯ ಬೇಕಾ. ಬೇಡ್ವಾ? ಮೈತ್ರಿಯ ಸಾಧಕ-ಬಾಧಕಗಳೇನು? ಒಂದು ವೇಳೆ ಮೈತ್ರಿಗೆ ಒಪ್ಪಿದರೆ ಯಾವ ಯಾವ 4 ಕ್ಷೇತ್ರಗಳನ್ನ ಕೇಳಬೇಕೇಂಬ ಬಗ್ಗೆ ಚರ್ಚಿ ನಡೆಯಲಿದೆ.