Sunday, December 22, 2024

ದೇವೇಗೌಡರ ಫ್ಯಾಮಿಲಿಗೆ ಮತ್ತೊಂದು ಆಘಾತ

ಬೆಂಗಳೂರು : ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡ ಅವರ ಕುಟುಂಬಕ್ಕೆ ಮೇಲಿಂದ ಮೇಲೆ ಶಾಕ್ ಎದುರಾಗುತ್ತಿದೆ. ಪ್ರಜ್ವಲ್ ರೇವಣ್ಣ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಪ್ರಜ್ವಲ್ ರೇವಣ್ಣ ಅವರು ಹಾಸನ ಸಂಸದ ಸ್ಥಾನದಿಂದ ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸಿ ಹೊರಡಿಸಿರುವ ಆದೇಶಕ್ಕೆ ತಡೆ ನೀಡಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. ಇದೇ ಸಪ್ಟಂಬರ್ 1ರಂದು ಪ್ರಜ್ವಲ್ ಆಯ್ಕೆ ಅಸಿಂಧುಗೊಳಿಸಿ ತೀರ್ಪು ನೀಡಲಾಗಿತ್ತು.

ಅಸಿಂಧು ಆದೇಶಕ್ಕೆ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸುವವರೆಗೂ ತಡೆ ನೀಡುವಂತೆ ಕೋರಿ ಪ್ರಜ್ವಲ್ ರೇವಣ್ಣ ಮಧ್ಯಂತರ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್​ ಇಂದು ಈ ತೀರ್ಪು ಪ್ರಕಟಿಸಿದೆ. ಈ ಮೂಲಕ ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡ ಕುಟುಂಬ ಮತ್ತೆ ಆಘಾತ ಅನುಭವಿಸಿದೆ.

ಸೆಪ್ಟೆಂಬರ್ 8ರಂದು ವಿಚಾರಣೆ ಪೂರ್ಣಗೊಳಿಸಿ ಹೈಕೋರ್ಟ್ ಆದೇಶ ಕಾಯ್ದಿರಿಸಿತ್ತು. ನ್ಯಾಯಮೂರ್ತಿ ಕೆ.ನಟರಾಜನ್ ಅವರ ಪೀಠ ಈ ಕುರಿತು ವಿಚಾರಣೆ ನಡೆಸಿತ್ತು. ಪ್ರಜ್ವಲ್ ರೇವಣ್ಣ ಪರ ಹಿರಿಯ ವಕೀಲ ಉದಯಹೊಳ್ಳ ವಾದ ಮಂಡಿಸಿದ್ದರು. ಅರ್ಜಿದಾರ ದೇವರಾಜೇಗೌಡ ಪರ ಹಿರಿಯ ವಕೀಲೆ ಪ್ರಮೀಳಾ ನೇಸರ್ಗಿ ವಾದಿಸಿದ್ದರು. ವಾದ-ಪ್ರತಿವಾದ ಆಲಿಸಿ ಆದೇಶ ಕಾಯ್ದಿರಿಸಿದ್ದ ಹೈಕೋರ್ಟ್ ಇಂದು ಆದೇಶ ನೀಡಿದೆ.

RELATED ARTICLES

Related Articles

TRENDING ARTICLES