Wednesday, January 22, 2025

ಅಕ್ರಮವಾಗಿ ರಕ್ತ ಚಂದನ ಸಾಗಿಸುತ್ತಿದ್ದ ಕಾರು​ ಅಪಘಾತ!

ಚಿಕ್ಕಬಳ್ಳಾಪುರ : ಸಿನಿಮೀಯ ಶೈಲಿಯಲ್ಲಿ ರಕ್ತ ಚಂದನ ಸಾಗಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲ್ಲೂಕು ರಾಷ್ಟ್ರೀಯ ಹೆದ್ದಾರಿ-7ರ ಸಾದಲಿ ಗೇಟ್ ಬಳಿ ನಡೆದಿದೆ.

ಇದನ್ನೂ ಓದಿ: ಗಣೇಶ ಚೌತಿಯ ಆಚರಣೆಗೆ ಸರ್ಕಾರಿ ರಜೆ ಗೊಂದಲ!

ಅಪಘಾತದಲ್ಲಿ ಒಬ್ಬರಿಗೆ ಗಂಭೀರ, ಮತ್ತಿಬ್ಬರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಆಂಧ್ರಪ್ರದೇಶದ ಕಡಪದಿಂದ ಬೆಂಗಳೂರಿನಿಂದ ಬೆಂಗಳೂರಿಗೆ ಸಾಗಿಸುತ್ತಿದ್ದಾಗ ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ, ಈ ವೇಳೆ ಗಂಭೀರವಾಗಿ ಗಾಯಗಳಾಗಿದ್ದ ಗಾಯಾಳುಗಳನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

ಆಂಧ್ರದಿಂದ ಬೆಂಗಳೂರಿಗೆ ಬರುತ್ತಿದ್ದ ಕಾರಿನಲ್ಲಿ 20 ಲಕ್ಷ ಮೌಲ್ಯದ 24 ರಕ್ತಚಂದನ ತುಂಡುಗಳು ತುಂಬಿದ್ದವು ಎನ್ನಲಾಗಿದೆ. ಸದ್ಯ ಈ ಪ್ರಕರಣವು ಪೆರೇಸಂದ್ರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

RELATED ARTICLES

Related Articles

TRENDING ARTICLES