Sunday, January 19, 2025

ಸಚಿವ ಸುಧಾಕರಿಂದ ಜಾತಿನಿಂದನೆಯಾಗಿದ್ದರೆ ರಾಜೀನಾಮೆ ನೀಡಲಿ: ಬೊಮ್ಮಾಯಿ

ಬೆಂಗಳೂರು: ಯೋಜನೆ ಮತ್ತು ಸಾಂಖಿಕ ಇಲಾಖೆ ಸಚಿವ ಡಿ.‌ಸುಧಾಕರ್ ಅವರಿಂದ ಜಾತಿ ನಿಂದನೆ ಆಗಿದ್ದರೆ, ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಚಿವ ಸುಧಾಕರ್ ಅವರು ತಮ್ಮ ವಿರುದ್ದ ಕೇಳಿ ಬಂದಿರುವ ಆರೋಪಗಳಿಗೆ ಕಾನೂನು ರೀತಿ ನಡೆದುಕೊಳ್ಳಬೇಕು. ಅದನ್ನು ಹಿಟ್ಟು ದಲಿತರ ಮೇಲೆ ದೌರ್ಜನ್ಯ ದಬ್ಬಾಳಿಕೆ ನಡೆಸಿರುವುದು ಸರಿಯಲ್ಲ. ಈ ಪ್ರಕರಣದಲ್ಲಿ ಪೊಲೀಸರು ಯಾವುದೇ ಒತ್ತಡಕ್ಕೆ ಮಣಿಯಬಾರದು. ದಲಿತರ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಸಾಮಾನ್ಯ ಜನರನ್ನು ಹೇಗೆ ಪೊಲಿಸ್ ಠಾಣೆಗೆ ಕರೆದುಕೊಂಡು ಬಂದು ವಿಚಾರಣೆ ನಡೆಸುತ್ತಾರೋ, ಅದೇ ರೀತಿ ಸಚಿವರನ್ನು ವಿಚಾರಣೆ ನಡೆಸಬೇಕು.

ಇದನ್ನೂ ಓದಿ: ಅನಿಷ್ಠ ಸರ್ಕಾರದ ವಿರುದ್ದ ಹೋರಾಟಕ್ಕೆ ಮೈತ್ರಿ ಅನಿವಾರ್ಯ: ಬಸವರಾಜ ಬೊಮ್ಮಾಯಿ

ಪೊಲಿಸರು ಒತ್ತಡಕ್ಕೆ ಮಣಿದರೆ, ರಾಜ್ಯದ ದಲಿತರು ಸರ್ಕಾರದ ವಿರುದ್ದ ಹೋರಾಟ ನಡೆಸಲಿದ್ದಾರೆ ಎಂದು ಎಚ್ಚರಿಸಿದರು. ಕಾಂಗ್ರೆಸ್ ನಾಯಕರು ಭಾಷಣದಲ್ಲಿ ಮಾತ್ರ ದಲಿತರ ಪರ ಮಾತನಾಡುತ್ತಾರೆ. ಆದರೆ, ಅವರ ಸಚಿವರ ನಡವಳಿಕೆ ಸಂಪೂರ್ಣ ದಲಿತ ವಿರೋಧಿಯಾಗಿದೆ. ಗ್ಯಾರೆಂಟಿ ಯೋಜನೆಗಳಿಗೆ ದಲಿತರಿಗೆ ಮೀಸಲಿಟ್ಟ 11 ಸಾವಿರ ಕೋಟಿ ರೂ. ಬಳಕೆ ಮಾಡಿಕೊಳ್ಳುತ್ತಿದ್ದಾರೆ. ದಲಿತರು ಇವರನ್ನು ಕ್ಷಮಿಸುವುದಿಲ್ಲ ಎಂದರು.

ಸ್ಟಾಲಿನ್ ಮನವೊಲಿಸಲಿ : 

ರಾಜ್ಯ ಸರ್ಕಾರ ಕಾವೇರಿ ನದಿ ನೀರಿನ ಹಂಚಿಕೆ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಬಳಿ ಸರ್ವ ಪಕ್ದ ‌ನಿಯೋಗ‌ ಕರೆದುಕೊಂಡ ಹೋಗುವ ಬದಲು ತಮಿಳುನಾಡು ಸಿಎಂ ಸ್ಟಾಲಿನ್ ಅವರಿಗೆ ರಾಜ್ಯದ ವಸ್ತುಸ್ಥಿತಿ ಮನವರಿಕೆ ಮಾಡಿ, ಅವರ ಮನವೊಲಿಸಬೇಕು. ಸುಪ್ರೀಂ ಕೋರ್ಟ್ ನಲ್ಲಿ ಪ್ರಕರಣ ಇರುವುದರಿಂದ ಪ್ರಧಾನಿ ಮಧ್ಯಸ್ಥಿಕೆ ವಹಿಸಲು ಬರುವುದಿಲ್ಲ ಎಂದು ಹೇಳಿದರು.

ತಮಿಳು ನಾಡು ಅಗತ್ಯಕ್ಕಿಂತ ಹೆಚ್ಚು ನೀರನ್ನು ಕುರುವೈ ಬೆಳೆಗೆ ಅಕ್ರಮವಾಗಿ ಬಳಸಿಕೊಂಡಿದೆ ಎಂದು ರಾಜ್ಯ ಸರ್ಕಾರ ಸಿಡಬ್ಲುಎಂಎ ಸಭೆಯಲ್ಲಿ ಬಲವಾಗಿ ಹೇಳುತ್ತಿಲ್ಲ. ಸೆ. 12 ರ ನಂತರ ತಮಿಳುನಾಡಿಗೆ ನೀರು ಬಿಡುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿದ್ದಾರೆ. ರಾಜ್ಯ ಸರ್ಕಾರ ತನ್ನ ನಿಲುವಿಗೆ ಎಷ್ಟು ಬದ್ದವಾಗಿರುತ್ತದೆ ಎಂದು ಕಾದು ನೋಡೋಣ ಎಂದರು.

RELATED ARTICLES

Related Articles

TRENDING ARTICLES