ಮಂಗಳೂರು : ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ಹೋರಾಟಕ್ಕೆ ಒಕ್ಕಲಿಗ ಸಮಾಜ ಬೆಂಬಲ ವ್ಯಕ್ತಪಡಿಸಿದೆ.
ಮಂಗಳೂರಿನಲ್ಲಿ ಒಕ್ಕಲಿಗ ಸಮಾಜದ ವತಿಯಿಂದ ಎರಡು ದಿನಗಳ ಧರಣಿ ಸತ್ಯಾಗ್ರಹ ಆರಂಭಗೊಂಡಿದ್ದು ಪ್ರಕರಣದ ಮರು ತನಿಖೆಗಾಗಿ ಆಗ್ರಹಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳ ಒಕ್ಕಲಿಗ ಸಮಾಜದ ಸದಸ್ಯರು ಮಂಗಳೂರಿನ ಮಿನಿ ವಿಧಾನಸೌಧ ಎದುರಲ್ಲಿ ಪ್ರತಿಭಟನಾ ಧರಣಿ ನಡೆಸಿದ್ದಾರೆ.
ಸೌಜನ್ಯ ಪ್ರಕರಣದಲ್ಲಿ ತನಿಖೆ ನಡೆಸಿದ ಅಧಿಕಾರಿಗಳೇ ಲೋಪ ಎಸಗಿದ್ದಾರೆ. ತನಿಖಾಧಿಕಾರಿಗಳು ಪ್ರಕರಣದಲ್ಲಿ ವೈಫಲ್ಯ ಮಾಡಿರುವುದು ಸಾಬೀತಾಗಿದೆ. ಇದಕ್ಕೆ ಯಾರ ಒತ್ತಡ ಕಾರಣವಾಗಿತ್ತು ಎಂಬ ಬಗ್ಗೆ ತನಿಖೆ ನಡೆಯಬೇಕು ಎಂದು ರಾಜ್ಯ ಸರ್ಕಾರವನ್ನು ಗೌಡ ಸೇವಾ ಸಂಘದ ಪ್ರತಿನಿಧಿಗಳು ಒತ್ತಾಯಿಸಿದ್ದಾರೆ.