Thursday, January 23, 2025

ಬೆಟ್ಟದಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ರಾಮನಗರ : ವಿದ್ಯಾರ್ಥಿನಿಯೊಬ್ಬಳು ಬೆಟ್ಟದಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ರಾಮದೇವರ ಬೆಟ್ಟದ ತಪ್ಪಲಿನಲ್ಲಿ ನಡೆದಿದೆ.

ಬೆಂಗಳೂರಿನ ಬೆಮೆಲ್ ಲೇಔಟ್​ನ ನಿವಾಸಿಯಾದ ಈಶಾ ಪ್ರಸಾದ್ (20) ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ. ಎಂಬ ಯುವತಿ ರಾಮದೇವರ ಬೆಟ್ಟಕ್ಕೆ ಏಕಾಂಗಿಯಾಗಿ ಬಂದಿದ್ದು, ಬೆಟ್ಟದ ಮೇಲಿಂದ ಬಿದ್ದು ಆತ್ಮಹತ್ಯೆಗೆ ಪ್ರಯತ್ನಿಸಿದ್ದಾಳೆ.

ಇದನ್ನು ಓದಿ : 2 ಲಕ್ಷಕ್ಕೂ ಅಧಿಕ ದಾಳಿಂಬೆ ಕಳ್ಳತನ ; ಸಿಸಿ ಕ್ಯಾಮರದಲ್ಲಿ ಸೆರೆ

ಅದೃಷ್ಟವಶಾತ್ ಸ್ಥಳೀಯರು ಅಲ್ಲೇ ಇದ್ದಿದ್ದರಿಂದ ಗಾಯಗೊಂಡ ಯುವತಿಯನ್ನು ರಕ್ಷಿಸಿದ್ದಾರೆ. ಯುವತಿಗೆ ಗಂಭೀರ ಗಾಯಗೊಂಡಿದ್ದು, ವಿದ್ಯಾರ್ಥಿನಿಯನ್ನು ರಾಮನಗರ ಜಿಲ್ಲಾಸ್ಟತ್ರೆಗೆ ದಾಖಲಿಸಲಾಗಿದೆ. ಆದರೆ ವಿದ್ಯಾರ್ಥಿನಿಯ ಈ ಆತ್ಮಹತ್ಯೆ ಯತ್ನಕ್ಕೆ ನಿಖರ ಕಾರಣ ಮಾತ್ರ ತಿಳಿದು ಬಂದಿಲ್ಲ.

ಈ ಘಟನಾ ಸಂಬಂಧ ರಾಮನಗರ ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

Related Articles

TRENDING ARTICLES