ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಈ ಬಾರಿ 11 ದಿನಗಳ ಕಾಲ ಗಣೇಶ ಪ್ರತಿಷ್ಠಾಪನೆ ಮಾಡುವ ವಿಚಾರಕ್ಕೆ ಸಂಬಂಧಿಸಿ ಸಂಘಟನೆಗಳ ನಡುವೆ ಪರ-ವಿರೋಧ ಚರ್ಚೆ ಏರ್ಪಟ್ಟಿದ್ದು ಅಧಿಕಾರಿಗಳಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.
ಗೌರಿ ಗಣೇಶ ಹಬ್ಬಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇರುವಾಗ ಗಣೇಶ ಪ್ರತಿಷ್ಠಾಪನೆ ವಿಚಾರವಾಗಿ ಇಲ್ಲಿನ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ಗದ್ದಲಕ್ಕೆ ಕಾರಣವಾಗುವ ಸೂಚನೆ ನಿಡುತ್ತಿದೆ. 11 ದಿನಗಳ ಪ್ರತಿಷ್ಠಾಪನೆಗೆ ಹಿಂದೂಪರ ಸಂಘಟನೆಗಳು ಬೇಡಿಕೆ ಇಟ್ಟಿದ್ದು ಇದಕ್ಕೆ ಕೆಲ ಸಂಘಟನೆಗಳು ವಿರೋಧವನ್ನು ವ್ಯಕ್ತಪಡಿಸಿದೆ.
ಇದನ್ನೂ ಓದಿ: ಕೋಟ್ಯಾಂತರ ರೂ. ವಂಚನೆ ಆರೋಪ: ಚೈತ್ರ ಕುಂದಾಪುರ ಪೊಲೀಸ್ ವಶಕ್ಕೆ!
ಕಳೆದ ಬಾರಿ 3 ದಿನಗಳ ಕಾಲ ಗಣೇಶ ಪ್ರತಿಷ್ಠಾಪನೆಗೆ ಪಾಲಿಕೆ ಅವಕಾಶ ಕಲ್ಪಿಸಿತ್ತು, ಇದೀಗ 11 ದಿನಗಳ ಕಾಲ ಕೂರಿಸಲು ಹಿಂದೂಪರ ಸಂಘಟನೆಗಳ ಬೇಡಿಕೆ ಹೆಚ್ಚಾಗಿದೆ. ಜೊತೆಗೆ ವಿರೋಧವು ಕೇಳಿಬರುತ್ತಿರುವುದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ತಲೆಬಿಸಿಯಾಗಿಸಿದೆ. ಗಣೇಶ ಹಬ್ಬ ಹತ್ತಿರ ಬರ್ತಿದ್ದಂತೆ ದಿನದಿಂದ ದಿನಕ್ಕೆ ಗೊಂದಲ ಮತ್ತಷ್ಟು ಹೆಚ್ಚಾಗುತ್ತಿದ್ದು ಪೊಲೀಸ್ ಇಲಾಖೆಗೂ ದೊಡ್ಡ ತಲೆನೋವಾಗಿ ಪರಿಣಮಿಸಿದೆ.