Monday, December 23, 2024

‘ಕೈ’ ಗೂಂಡಾಗಿರಿ ಸಚಿವರ ಪಟ್ಟಿ ರಿಲೀಸ್ : ಯಾರೆಲ್ಲಾ ಇದ್ದಾರೆ ಗೊತ್ತಾ?

ಬೆಂಗಳೂರು : ಸಿದ್ದರಾಮಯ್ಯ ಸಂಪುಟದ ಸಚಿವ ಡಿ. ಸುಧಾಕರ್ ಮೇಲೆ ವಂಚನೆ ಹಾಗೂ ಬೆದರಿಕೆ ಪ್ರಕರಣ ದಾಖಲಾದ ಬೆನ್ನಲ್ಲೇ, ಬಿಜೆಪಿ ಕಾಂಗ್ರೆಸ್​ ಗೂಂಡಾಗಿರಿ ಸಚಿವರ ಪಟ್ಟಿ ರಿಲೀಸ್ ಮಾಡಿದೆ.

ಟ್ವೀಟ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತುಘಲಕ್ ದರ್ಬಾರಿನ ಸಚಿವ ಸಂಪುಟದಲ್ಲಿ ಗೂಂಡಾಗಿರಿ ಸಚಿವರ ಪಟ್ಟಿ ಬಿಡುಗಡೆಗೊಳಿಸಿದೆ. ಇದರಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಹೆಸರು ಫಸ್ಟ್ ಇದೆ.

ಪ್ರತಿಭಟನೆ ಮಾಡುವ ಸಂಘಟನೆಗಳನ್ನು ಬೆದರಿಸುವ ಮೂಲಕ ಧಮ್ಕಿ ಹಾಕುವ ಡಿಸಿಎಂ ಡಿ.ಕೆ. ಶಿವಕುಮಾರ್. ಜಾತಿ ನಿಂದನೆ ಮಾಡಿ ಮಹಿಳೆ ಮೇಲೆ ಹಲ್ಲೆ ಮಾಡುವ ಪುಡಿರೌಡಿ ವರ್ತನೆಯ ಸಚಿವ ಡಿ. ಸುಧಾಕರ್. ವರ್ಗಾವಣೆ ದಂಧೆ, ಅಧಿಕಾರಿಗಳಿಗೆ ಕಲೆಕ್ಷನ್ ಟಾರ್ಗೆಟ್, ಕೆಎಸ್ಆರ್‌ಟಿಸಿ ಸಿಬ್ಬಂದಿ ಆತ್ಮಹತ್ಯೆ ಯತ್ನ, ರೈತರಿಗೆ ಬೆದರಿಕೆ ಹಾಕುವ ಕೃಷಿ ಸಚಿವ ಚೆಲುವರಾಯಸ್ವಾಮಿ.

ಧಮ್ಕಿ ಹಾಕುವ ಲಕ್ಣ್ಮಿ ಸಹೋದರ

ಕ್ಷೇತ್ರದಲ್ಲಿ ಗೂಂಡಾ ಪಡೆಯನ್ನು ಬಿಟ್ಟು ಅಧಿಕಾರಿಗಳ ಮೇಲೆ ಹಲ್ಲೆ ಮಾಡಿಸುವ ಸಚಿವ ಪ್ರಿಯಾಂಕ್ ಖರ್ಗೆ. ತನ್ನ ಸಹೋದರಿ ಮಿನಿಸ್ಟರ್ ಎನ್ನುವ ಕಾರಣಕ್ಕೆ ಮಾಧ್ಯಮದವರಿಗೆ ಅವಾಜ್ ಹಾಕಿ ಧಮ್ಕಿ ಹಾಕುವ ಸಚಿವೆ ಲಕ್ಣ್ಮಿ ಹೆಬ್ಬಾಳ್ಕರ್‌ ಸಹೋದರ ಚೆನ್ನರಾಜ್ ಹಟ್ಟಿಹೊಳಿ. ಪರಿಹಾರಕ್ಕಾಗಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಅಂತ ಉಡಾಫೆ ಮಾತನಾಡುವ ಸಚಿವ ಶಿವಾನಂದ ಪಾಟೀಲ್.

ಹೀಗೆ, ಕೆಲವು ಸಚಿವರ ಹೆಸರನ್ನು ಪಟ್ಟಿಯಲ್ಲಿ ಉಲ್ಲೇಖಿಸಿದೆ. ಅಲ್ಲದೆ, ಪ್ರಶ್ನಿಸುವವರನ್ನು, ಪ್ರತಿಭಟಿಸುವವರನ್ನು ಗೂಂಡಾ ವರ್ತನೆ ತೋರಿ ಬಾಯಿ ಮುಚ್ಚಿಸುವ ಘನಂದಾರಿ ಕೆಲಸವನ್ನು ಸಿದ್ದರಾಮಯ್ಯ ಅವರ ಸಂಪುಟ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದೆ.

RELATED ARTICLES

Related Articles

TRENDING ARTICLES