Sunday, December 22, 2024

ಮಂಗಳೂರು ಏರ್​​ಪೋರ್ಟ್​: ಪೌಡರ್​ ರೂಪದಲ್ಲಿ ಸಾಗಿಸುತ್ತಿದ್ದ ಚಿನ್ನ ವಶ!

ಮಂಗಳೂರು : ಏರ್​​ಪೋರ್ಟ್​​ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭಾರೀ ಪ್ರಮಾಣದ ಚಿನ್ನವನ್ನ ವಶಕ್ಕೆ ಪಡೆದಿದ್ದಾರೆ. ಪೌಡರ್ ರೂಪದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 14.50 ಲಕ್ಷ ಮೌಲ್ಯದ ಚಿನ್ನವನ್ನ ವಶಕ್ಕೆ ಪಡೆಯಲಾಗಿದೆ.

ದುಬೈನಿಂದ ಮಂಗಳೂರಿಗೆ ಬಂದಿದ್ದ ಏರ್ ಇಂಡಿಯಾ ವಿಮಾನದಲ್ಲಿ ಚಿನ್ನ ಸಾಗಾಟದ ಖಚಿತ ಮಾಹಿತಿ ಮೇರೆಗೆ ಕಸ್ಟಮ್ಸ್​ ಅಧಿಕಾರಿಗಳು ಚಿನ್ನವನ್ನು ರಟ್ಟಿನ ಪೆಟ್ಟಿಗೆಯ ಒಳಭಾಗದಲ್ಲಿ ಅಡಗಿಸಿಟ್ಟಿರುವುದು ಪತ್ತೆಯಾಗಿದೆ.

ಇದನ್ನೂ ಓದಿ: ಮಾನಸಿಕ ಅಸ್ವಸ್ಥ ಯುವತಿಯ ಜೊತೆಗೆ ಪೊಲೀಸರ ಅಸಭ್ಯ ವರ್ತನೆ!

ಚಿನ್ನವನ್ನು ಪೌಡರ್ ರೂಪಕ್ಕಿಳಿಸಿ ಕಳ್ಳಸಾಗಣೆ ಮಾಡುತ್ತಿದ್ದ ಪ್ರಯಾಣಿಕನನ್ನ ವಶಕ್ಕೆ ಪಡೆದಿರುವ ಕಸ್ಟಮ್ಸ್ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

RELATED ARTICLES

Related Articles

TRENDING ARTICLES