Sunday, January 19, 2025

ಸರಣಿ ಅಪಘಾತ : ದಂಪತಿ ಸ್ಥಳದಲ್ಲೇ ಸಾವು, 14 ತಿಂಗಳ ಮಗು ಅನಾಥ

ಚಿಕ್ಕಮಗಳೂರು : ಚಿಕ್ಕಮಗಳೂರು ತಾಲ್ಲೂಕಿನ ಹಿರೇಗೌಜ ಸಮೀಪ ಸರಣಿ ಅಪಘಾತ ಸಂಭವಿಸಿದ್ದು, ಬೈಕ್​ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 14 ತಿಂಗಳ ಕಂದ ಅನಾಥವಾಗಿದೆ.

ಶಿವಮೊಗ್ಗ ಮೂಲದ ಸಯ್ಯದ್ ಆಸೀಫ್ (38) ಹಾಗೂ ಮಾಜಿನಾ (33) ಮೃತ ದಂಪತಿ. ಕಾರು, ಟಿಪ್ಪರ್ ಲಾರಿ ಹಾಗೂ ಬೈಕ್ ನಡುವೆ ಈ ಭೀಕರ ದುರಂತ ಸಂಭವಿಸಿದೆ. ತಂದೆ-ತಾಯಿ ಇಹಲೋಕ ತ್ಯಜಿಸಿದ್ದು, 14 ತಿಂಗಳ ಮಗುವಿಗೆ ಗಂಭೀರ ಗಾಯಗಳಾಗಿವೆ.

ಘಟನೆ ಬಳಿಕ ಟಿಪ್ಪರ್ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ತಡರಾತ್ರಿ ಈ ಘಟನೆ ನಡೆದಿದೆ. ಮೃತ ದಂಪತಿ ಚಿಕ್ಕಮಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ. ಈ ಸಂಬಂಧ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

Related Articles

TRENDING ARTICLES